ನೀತಿ‌ಸಂಹಿತೆ ಮಧ್ಯೆ ಸರಕಾರಿ ಐಬಿಯಲ್ಲೇ ಅಧಿಕಾರಿಗಳಿಂದ ಎಣ್ಣೆ ಪಾರ್ಟಿ; ವಿಡಿಯೋ ವೈರಲ್​

Edited By: ಕಿರಣ್ ಹನುಮಂತ್​ ಮಾದಾರ್

Updated on: May 23, 2024 | 3:12 PM

ಜಮಖಂಡಿ ವಿಭಾಗದ ಜಿಲ್ಲಾ ಪಂಚಾಯತಿ ಇಂಜಿನಿಯರ್​ಗಳು ಕಚೇರಿಗೆ ಚಕ್ಕರ್ ಹೊಡೆದು ಗುತ್ತಿಗೆದಾರರೊಂದಿಗೆ ಸೇರಿಕೊಂಡು ಹಾಡಹಗಲೇ ಮದ್ಯಸೇವಿಸಿ ಮೋಜು ಮಸ್ತಿ ಮಾಡಿದ ಘಟನೆ ನಿನ್ನೆ(ಮೇ.22) ಮದ್ಯಾಹ್ನ 3 ಗಂಟೆಯ ಸುಮಾರಿಗೆ ಜಮಖಂಡಿ ಸರಕಾರಿ ಐಬಿ ರಮಾ ನಿವಾಸದಲ್ಲಿ ನಡೆದಿದೆ.

ಬಾಗಲಕೋಟೆ, ಮೇ.23: ‌ನೀತಿ‌ಸಂಹಿತೆ ಮಧ್ಯೆ ಜಮಖಂಡಿ ಸರಕಾರಿ ಐಬಿ(Jamkhandi Government IB)ಯಲ್ಲೇ ಅಧಿಕಾರಿಗಳು ಎಣ್ಣೆ ಪಾರ್ಟಿ ಮಾಡಿದ ಘಟನೆ ನಡೆದಿದೆ. ಜಮಖಂಡಿ ವಿಭಾಗದ ಜಿಲ್ಲಾ ಪಂಚಾಯತಿ ಇಂಜಿನಿಯರ್​ಗಳು ಕಚೇರಿಗೆ ಚಕ್ಕರ್ ಹೊಡೆದು ಗುತ್ತಿಗೆದಾರರೊಂದಿಗೆ ಸೇರಿಕೊಂಡು ಹಾಡಹಗಲೇ ಮದ್ಯಸೇವಿಸಿ ಮೋಜು ಮಸ್ತಿ ಮಾಡಿದ್ದಾರೆ. ನಿನ್ನೆ(ಮೇ.22) ಮದ್ಯಾಹ್ನ 3 ಗಂಟೆಯ ಸುಮಾರಿಗೆ ಸರಕಾರಿ ಐಬಿ ರಮಾ ನಿವಾಸದಲ್ಲಿ ಜಿಲ್ಲಾ ಪಂಚಾಯತಿ ವಿಭಾಗ ಜಮಖಂಡಿ ಎಇಇ ಎಮ್​ಎಸ್​ ನಾಯಕ, ಇಂಜಿನಿಯರ್​ಗಳಾದ ರಾಮಪ್ಪ ರಾಠೋಡ್, ಜಗದೀಶ್ ನಾಡಗೌಡ, ಗಜಾನನ ಪಾಟೀಲ್, ಶ್ರೀಶೈಲ್ ಹೂಗಾರ ಹಾಗೂ ಗುತ್ತಿಗೆದಾರರಾದ ಸಾಗರ, ಶೀತಲ ಹರಿಜನ ಸೇರಿದಂತೆ ಆರು ಜನ ಗುತ್ತಿಗೆದಾರರು ಸೇರಿಕೊಂಡು ಮದ್ಯಸೇವನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More