AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊದಲು ನುಡಿಯಲ್ಲೇ ಅಚ್ಚರಿ ಮೂಡಿಸಿದ ಪುಟಾಣಿ: ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್

ತೊದಲು ನುಡಿಯಲ್ಲೇ ಅಚ್ಚರಿ ಮೂಡಿಸಿದ ಪುಟಾಣಿ: ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Sep 27, 2026 | 5:46 PM

Share

ಬಾಗಲಕೋಟೆಯ ನಾಲ್ಕು ವರ್ಷದ ಬಾಲಕಿ ವೈಷ್ಣವಿ ಕಡಗದ ತನ್ನ ಅಸಾಧಾರಣ ಪ್ರತಿಭೆಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದ್ದಾಳೆ. ತೊದಲು ನುಡಿಯಲ್ಲೇ ಶ್ಲೋಕ, ವಚನ, ವರ್ಣಮಾಲೆ, ಸಂಖ್ಯೆಗಳು ಮತ್ತು ಪದಗಳನ್ನು ನೆನಪಿಟ್ಟುಕೊಂಡು ಹೇಳುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾಳೆ. ಈಕೆಯ ಸಾಧನೆಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ, ಸೆಪ್ಟೆಂಬರ್​​ 27: ‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬ ಗಾದೆಗೆ ತಕ್ಕಂತೆ, ಬಾಗಲಕೋಟೆಯ ನಾಲ್ಕು ವರ್ಷದ ಬಾಲಕಿ ವೈಷ್ಣವಿ ಪ್ರದೀಪ್ ಕಡಗದ ತನ್ನ ಅಸಾಧಾರಣ ಪ್ರತಿಭೆಯಿಂದ ಎಲ್ಲರ ಗಮನ ಸೆಳೆದಿದ್ದಾಳೆ. ತೊದಲು ನುಡಿಯಲ್ಲೇ ಕನ್ನಡ, ಇಂಗ್ಲಿಷ್ ವರ್ಣಮಾಲೆಗಳು, 1 ರಿಂದ 120 ರವರೆಗಿನ ಅಂಕಿ ಸಂಖ್ಯೆಗಳು (ಹಿಮ್ಮುಖವಾಗಿ), ಶ್ಲೋಕಗಳು, ವಚನಗಳು, ಮೂರು ಪ್ರಾಸಗಳು, 14 ಹಿಂದಿ ಪದಗಳು ಮತ್ತು 15 ಕನ್ನಡ ಪದಗಳನ್ನು ನಿರರ್ಗಳವಾಗಿ ಹೇಳುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ನಿರ್ಮಿಸಿದ್ದಾಳೆ. ಮಗಳ ಪ್ರತಿಭೆ ಕಂಡು ತಂದೆ ಪ್ರದೀಪ್ ಹಾಗೂ ತಾಯಿ ಪ್ರಿಯಾಂಕಾ ಕಡಗದ ವಿಡಿಯೊ ಮಾಡಿ, ಜುಲೈ ತಿಂಗಳಲ್ಲಿ ಆನ್‌ಲೈನ್ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಪರಿಗಣಿಸಿದ ಸಂಸ್ಥೆಯು ಆಗಸ್ಟ್ 13 ರಂದು ವೈಷ್ಣವಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಅಚೀವರ್ ಪ್ರಶಸ್ತಿ ಮತ್ತು ಪದಕವನ್ನು ಘೋಷಿಸಿದೆ. ಸದ್ಯ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More