ಬಾಗಲಕೋಟೆ: ಸರ್ಕಾರಿ ಔಷಧಿ ಉಗ್ರಾಣದಲ್ಲಿ ಲಕ್ಷಾಂತರ ಮೌಲ್ಯದ ಅವಧಿ ಮೀರಿದ ಔಷಧಿ ಪತ್ತೆ, ನಿರ್ಲಕ್ಷ್ಯದ ಆರೋಪ

ಬಾಗಲಕೋಟೆ: ಸರ್ಕಾರಿ ಔಷಧಿ ಉಗ್ರಾಣದಲ್ಲಿ ಲಕ್ಷಾಂತರ ಮೌಲ್ಯದ ಅವಧಿ ಮೀರಿದ ಔಷಧಿ ಪತ್ತೆ, ನಿರ್ಲಕ್ಷ್ಯದ ಆರೋಪ

Edited By:

Updated on: Nov 28, 2026 | 9:59 AM

ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಔಷಧಿ ಉಗ್ರಾಣದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅವಧಿ ಮೀರಿದ ಮಾತ್ರೆ, ಸಿರಪ್, ಸಲೈನ್ ಸೇರಿದಂತೆ 48 ಔಷಧಿಗಳು ಪತ್ತೆಯಾಗಿವೆ. ರೋಗಿಗಳು ಔಷಧಿಯ ಕೊರತೆಯಿಂದ ಬಳಲುತ್ತಿರುವಾಗ, ಗುಣಮಟ್ಟವಿಲ್ಲದ ಹಾಗೂ ಅವಧಿ ಮೀರಿದ ಔಷಧಿಗಳು ಸಂಗ್ರಹಗೊಂಡಿರುವುದು ಜಿಲ್ಲಾಡಳಿತದ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದೆ.

ಬಾಗಲಕೋಟೆ, ನವೆಂಬರ್ 28: ಬಾಗಲಕೋಟೆ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಔಷಧಿಗಳ ಕೊರತೆ ಎದುರಿಸುತ್ತಿರುವ ರೋಗಿಗಳಿಗೆ ಮತ್ತೊಂದು ಆಘಾತಕಾರಿ ವಿಚಾರ ಬಯಲಾಗಿದೆ. ಜಿಲ್ಲಾ ಔಷಧಿ ಉಗ್ರಾಣದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅವಧಿ ಮೀರಿದ ಹಾಗೂ ಗುಣಮಟ್ಟವಿಲ್ಲದ ಔಷಧಿಗಳು ಪತ್ತೆಯಾಗಿವೆ. ಮಾತ್ರೆಗಳು, ಸಿರಪ್‌ಗಳು ಮತ್ತು ಸಲೈನ್ ಸೇರಿದಂತೆ ಒಟ್ಟು 48 ವಿವಿಧ ಔಷಧಿಗಳು ಅವಧಿ ಮೀರಿವೆ ಎಂದು ಗುರುತಿಸಲಾಗಿದೆ.

ಈ ಔಷಧಿ ಉಗ್ರಾಣದಲ್ಲಿ ಕೆಲವೊಂದು ಔಷಧಗಳನ್ನು ಸಂಗ್ರಹಿಸಲು ಸೂಕ್ತ ಫ್ರಿಡ್ಜ್‌ಗಳ ವ್ಯವಸ್ಥೆ ಇಲ್ಲದಿರುವುದು ಅವಾಂತರಕ್ಕೆ ಕಾರಣವಾಗಿದೆ. ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿರುವ ಈ ಉಗ್ರಾಣದಲ್ಲಿ ಅವಧಿ ಮೀರಿದ ಔಷಧಿಗಳು ರಾಶಿ ರಾಶಿಯಾಗಿ ಬಿದ್ದಿದ್ದು, ಬಡ ರೋಗಿಗಳಿಗೆ ತಲುಪಬೇಕಾದ ಔಷಧಿಗಳು ಈ ರೀತಿ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಸುವರ್ಣಾ ಕುಲಕರ್ಣಿ ಅವರು ಉಗ್ರಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ 206 ಔಷಧಿಗಳ ಲಭ್ಯತೆಯಿದ್ದು, ಅದರಲ್ಲಿ 25 ಕ್ವಾರಂಟೈನ್ ಅವಧಿಯಲ್ಲಿವೆ. ಅವಧಿ ಮೀರಿದ ಹಾಗೂ ಗುಣಮಟ್ಟವಿಲ್ಲದ 48 ಔಷಧಿಗಳನ್ನು ವೈಜ್ಞಾನಿಕವಾಗಿ ನಾಶಪಡಿಸಲು ರಾಜ್ಯ ಕೆಎಸ್‌ಎಂಎಸ್‌ಸಿಎಲ್‌ಗೆ ಪತ್ರ ಬರೆಯಲಾಗಿದೆ ಎಂದು ಡಿಎಚ್‌ಒ ತಿಳಿಸಿದ್ದಾರೆ. ಈ ಘಟನೆ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More