ನಮ್ಮನ್ನು ಬಿಟ್ಟು ಹೋಗ್ಬೇಡಿ ಸರ್: ಶಿಕ್ಷಕನಿಗೆ ವಿದ್ಯಾರ್ಥಿಗಳ ಕಣ್ಣೀರಿನ ಬೀಳ್ಕೊಡುಗೆ
ಬಾಗಲಕೋಟೆಯ ಕರಡಿ ಗ್ರಾಮದ ದೈಹಿಕ ಶಿಕ್ಷಕ ಗುರುನಾಥ ಕೊಂಡಕಾರ ವರ್ಗಾವಣೆಗೊಂಡಿದ್ದಾರೆ. ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕ ಕೊಂಡಕಾರರನ್ನು ಕಳುಹಿಸಲು ವಿದ್ಯಾರ್ಥಿಗಳು ಕಣ್ಣೀರು ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. "ನಮ್ಮನ್ನು ಬಿಟ್ಟು ಹೋಗಬೇಡಿ ಸರ್" ಎಂದು ಮಕ್ಕಳು ಗೋಳಾಡಿದ್ದು, ಶಿಕ್ಷಕ-ವಿದ್ಯಾರ್ಥಿಗಳ ಬಾಂಧವ್ಯದ ಆಳವನ್ನು ಬಿಂಬಿಸಿದೆ. ಈ ಘಟನೆ ಇಡೀ ರಾಜ್ಯದ ಗಮನ ಸೆಳೆದಿದೆ.
ಬಾಗಲಕೋಟೆ, ನ.29: ಜಿಲ್ಲೆಯ ಇಳಕಲ್ ತಾಲೂಕಿನ ಕರಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಗುರುನಾಥ ಕೊಂಡಕಾರ ಎಂಬ ದೈಹಿಕ ಶಿಕ್ಷಕರೊಬ್ಬರು ವರ್ಗಾವಣೆಗೊಂಡಿದ್ದಾರೆ. ಇವರು ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕ. ಇದೀಗ ಅವರು ವರ್ಗಾವಣೆಗೊಂಡಿದಕ್ಕೆ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದಾರೆ. ಈ ಬಗ್ಗೆ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ನಮ್ಮನ್ನು ಬಿಟ್ಟು ಹೋಗಬೇಡಿ ಸರ್ ಎಂದು ವಿದ್ಯಾರ್ಥಿಗಳು ಗೋಳಾಡಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Nov 29, 2025 01:29 PM
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

