ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ ಎಂದಿದ್ಯಾಕೆ ಶ್ರೀರಾಮುಲು?

Edited By:

Updated on: Mar 30, 2026 | 3:27 PM

ಕಾಂಗ್ರೆಸ್​​ನ ಎಚ್​​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇದೇ ಏಪ್ರಿಲ್ 9ರಂದು ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​​ನ ನಾಯಕರಿಂದ ಭರ್ಜರಿ ಮತಬೇಟೆ ನಡೆದಿದೆ. ಇನ್ನು ಇಂದಿನಿಂದ (ಮಾರ್ಚ್ 30) ಸಿಎಂ ಸಿದ್ದರಾಮಯ್ಯ ಸಹ ಪ್ರಚಾರಕ್ಕಿಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಕ್ಯಾಂಪೇನ್ ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಶ್ರೀರಾಮುಲು ಸಹ ಪ್ರಚಾರ ನಡೆಸಿದ್ದು, ಈ ವೇಳೆ ಸಿದ್ದರಾಮಯ್ಯ ವಿರದ್ಧ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆ, (ಮಾರ್ಚ್ 30): ಕಾಂಗ್ರೆಸ್​​ನ  (Congress) ಎಚ್​​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Bagalkot By Election) ಇದೇ ಏಪ್ರಿಲ್ 9ರಂದು ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​​ನ ನಾಯಕರಿಂದ ಭರ್ಜರಿ ಮತಬೇಟೆ ನಡೆದಿದೆ. ಇನ್ನು ಇಂದಿನಿಂದ (ಮಾರ್ಚ್ 30) ಸಿಎಂ ಸಿದ್ದರಾಮಯ್ಯ ಸಹ ಪ್ರಚಾರಕ್ಕಿಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಕ್ಯಾಂಪೇನ್ ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಶ್ರೀರಾಮುಲು ಸಹ ಪ್ರಚಾರ ನಡೆಸಿದ್ದು, ಈ ವೇಳೆ ಟಿವಿ9 ಜತೆ ಮಾತನಾಡಿದ ರಾಮುಲು, ಸಿದ್ದರಾಮಯ್ಯ ಬಾದಾಮಿ ಶಾಸಕರಾಗಿದ್ದಾಗ ಅಭಿವೃದ್ಧಿ ಮಾಡಿಲ್ಲ. ಆಗ ಕಳ್ಳ ಮತಗಳಿಂದ ನನ್ನ ವಿರುದ್ಧ ಗೆದ್ದಿದ್ದರು. ಈ ವೇಳೆ ಸಿ.ಎಂ.ಇಬ್ರಾಹಿಂ ಅವರೇ ಹೇಳಿದ್ದಾರೆ.ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ. ಹೀಗಾಗಿ 5 ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ.ಸಿದ್ದರಾಮಯ್ಯ ಪ್ರಚಾರ ಮಾಡಿದರೂ ಕಾಂಗ್ರೆಸ್​ ಗೆಲ್ಲುವುದಿಲ್ಲ. ಇಡೀ ಸಚಿವ ಸಂಪುಟ ಸಮೇತ ಬಂದರೂ ಬಿಜೆಪಿ ಗೆಲುವು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More