ಮೂರನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು?

Edited By:

Updated on: Mar 22, 2026 | 6:48 PM

ಬಾಗಲಕೋಟೆ ಉಪಚುನಾವಣೆಯ (Bagalkot By Election) ಕಾಂಗ್ರೆಸ್ ಟಿಕೆಟ್​ ಎಚ್​​ ವೈ ಮೇಟಿ ಪುತ್ರ ಉಮೇಶ್ ಮೇಟಿ ಅವರಿಗೆ ನೀಡಲಾಗಿದೆ. ಟಿಕೆಟ್ ಗಾಗಿ ನಾಲ್ವರು ಮೇಟಿ ಮಕ್ಕಳ ನಡುವೆ ಕಿತ್ತಾಟ ಶುರುವಾಗಿತ್ತು. ಅಂತಿಮವಾಗಿ ಸಿದ್ದರಾಮಯ್ಯ ಸಂಧಾನಸಭೆ ಮಾಡಿ ಕೊನೆಗೆ ಉಮೇಶ್ ಅವರಿಗೆ ಮಣೆ ಹಾಕಿದ್ದಾರೆ. ಇನ್ನು ಟಿಕೆಟ್​​​​ನ ಪ್ರಬಲ ಆಕಾಂಕ್ಷಿಯಾಗಿದ್ದ ಮಹಾದೇವಿ ಮೇಟಿ ಸಹ ತಣ್ಣಗಾಗಿದ್ದಾರೆ. ಯಾಕಂದ್ರೆ ಕೆಲ ದಿನಗಳಿಂದಷ್ಟೇ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವ ಬಗ್ಗೆ ಬಹಿರಂಗವಾಗಿ ಹೇಳಿದ್ದರು. ಆದ್ರೆ, ಇದೀಗ ಸಿಎಂ ಸಂಧಾನ ಸಭೆ ಮಾಡಿದ ಬಳಿಕ ಮಹಾದೇವಿ ಮೇಟಿ ಕೂಲ್ ಆಗಿದ್ದು, ಸಹೋದರ ಉಮೇಶ್​ ಗೆ ಟಿಕೆಟ್ ನೀಡಿರುವುದಕ್ಕೆ ಸಂತಸಗೊಂಡಿದ್ದಾರೆ.

ಬಾಗಲಕೋಟೆ, (ಮಾರ್ಚ್ 22): ಬಾಗಲಕೋಟೆ ಉಪಚುನಾವಣೆಯ (Bagalkot By Election) ಕಾಂಗ್ರೆಸ್ ಟಿಕೆಟ್​ ಎಚ್​​ ವೈ ಮೇಟಿ ಪುತ್ರ ಉಮೇಶ್ ಮೇಟಿ ಅವರಿಗೆ ನೀಡಲಾಗಿದೆ. ಟಿಕೆಟ್ ಗಾಗಿ ನಾಲ್ವರು ಮೇಟಿ ಮಕ್ಕಳ ನಡುವೆ ಕಿತ್ತಾಟ ಶುರುವಾಗಿತ್ತು. ಅಂತಿಮವಾಗಿ ಸಿದ್ದರಾಮಯ್ಯ ಸಂಧಾನಸಭೆ ಮಾಡಿ ಕೊನೆಗೆ ಉಮೇಶ್ ಅವರಿಗೆ ಮಣೆ ಹಾಕಿದ್ದಾರೆ. ಇನ್ನು ಟಿಕೆಟ್​​​​ನ ಪ್ರಬಲ ಆಕಾಂಕ್ಷಿಯಾಗಿದ್ದ ಮಹಾದೇವಿ ಮೇಟಿ ಸಹ ತಣ್ಣಗಾಗಿದ್ದಾರೆ. ಯಾಕಂದ್ರೆ ಕೆಲ ದಿನಗಳಿಂದಷ್ಟೇ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವ ಬಗ್ಗೆ ಬಹಿರಂಗವಾಗಿ ಹೇಳಿದ್ದರು. ಆದ್ರೆ, ಇದೀಗ ಸಿಎಂ ಸಂಧಾನ ಸಭೆ ಮಾಡಿದ ಬಳಿಕ ಮಹಾದೇವಿ ಮೇಟಿ ಕೂಲ್ ಆಗಿದ್ದು, ಸಹೋದರ ಉಮೇಶ್​ ಗೆ ಟಿಕೆಟ್ ನೀಡಿರುವುದಕ್ಕೆ ಸಂತಸಗೊಂಡಿದ್ದಾರೆ. ಅಲ್ಲದೇ ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲುಸುತ್ತೇವೆ ಎನ್ನುವುದನ್ನು ಸಹ ಹೇಳಿದ್ದಾರೆ. ಇನ್ನು ಟಿವಿ9ಗೆ ಮಹಾದೇವಿ ಮೇಟಿ ಪ್ರತಿಕ್ರಿಯಿಸಿದ್ದು, ಉಮೇಶ್ ಮೇಟಿಗೆ ಟಿಕೆಟ್ ಕೊಟ್ಡಿದ್ದು ಸಂತಸ ತಂದಿದೆ. ನಾನು ಅಂದುಕೊಂಡಂತೆ ಸಹೋದರ ಉಮೇಶ್ ಮೇಟಿಗೆ ಟಿಕೆಟ್ ನೀಡಲಾಗಿದೆ. ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಎಲ್ಲ ಬಂಡಾಯ,ಭಿನ್ನಾಭಿಪ್ರಾಯ ಸರಿಯಾಗಿದೆ. ನಾಳೆ ನಾಮಪತ್ರ ಸಲ್ಲಿಸಲು ನಾನು ಸಹೋದರನ ಜೊತೆ ಹೋಗುತ್ತೇನೆ. ಪ್ರಚಾರಕ್ಕೂ ನಾಲ್ಕು ಜನ ಮಕ್ಕಳು ಒಟ್ಟಾಗಿ ಹೋಗುತ್ತೇವೆ ಎಂದರು.

ಇದನ್ನೂ ಓದಿ: ಉಪ ಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ‘ಕೈ’ ಅಭ್ಯರ್ಥಿಗಳ ಹೆಸರು ಘೋಷಣೆ

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More