ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್ಗೆ ಮುನ್ನಡೆ; ಕಾರ್ಯಕರ್ತರ ಸಂಭ್ರಮ
ಬಾಗಲಕೋಟೆ ನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರಂಭಿಕ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಕಾಂಗ್ರೆಸ್ ಬಾವುಟಗಳನ್ನು ಪ್ರದರ್ಶಿಸಿ, ಪಕ್ಷ ಹಾಗೂ ನಾಯಕರ ಪರ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆ, ಮೇ 04: ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಆರಂಭಿಕ ಸುತ್ತಿನಿಂದಲೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಸಾಧಿಸಿದ್ದಾರೆ. ಈ ಬೆಳವಣಿಗೆಯಿಂದಾಗಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಹರ್ಷೋದ್ಗಾರ ಮೂಡಿದೆ. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಸಂಭ್ರಮಾಚರಣೆ ನಡೆಸಿದ್ದು, ಕಾಂಗ್ರೆಸ್ ಬಾವುಟಗಳನ್ನು ಹಿಡಿದು, ಜೈಕಾರಗಳನ್ನು ಕೂಗಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


