ಬಾಗಲಕೋಟೆ ಉಪ ಚುನಾವಣೆಗೆ ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?

Edited By:

Updated on: Apr 08, 2026 | 12:54 PM

ಬಾಗಲಕೋಟೆ ಉಪಚುನಾವಣೆಗೆ ವ್ಯಾಪಕ ಸಿದ್ಧತೆಗಳು ನಡೆದಿವೆ. ನವನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಸ್ಟರಿಂಗ್ ಕಾರ್ಯದಲ್ಲಿ ನಿರತರಾಗಿದ್ದಾರೆ. 322 ಮತಗಟ್ಟೆಗಳಿಗೆ 1564 ಸಿಬ್ಬಂದಿ ನಿಯೋಜಿಸಲಾಗಿದ್ದು, 2.5 ಲಕ್ಷಕ್ಕೂ ಹೆಚ್ಚು ಮತದಾರರು ನಾಳೆ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಶಾಂತಿಯುತ ಮತದಾನಕ್ಕೆ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

ಬಾಗಲಕೋಟೆ, ಏಪ್ರಿಲ್​​ 08: ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ನಾಳೆ ನಡೆಯಲಿರುವ ಮತದಾನ ಪ್ರಕ್ರಿಯೆಗಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಬಾಗಲಕೋಟೆಯ ನವನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆದಿದ್ದು, ಮತಗಟ್ಟೆಗಳಿಗೆ ನಿಯೋಜಿಸಲಾಗಿರುವ ಸಿಬ್ಬಂದಿಗಳು ಇವಿಎಂ ಯಂತ್ರಗಳನ್ನು ಪಡೆದು ತಮ್ಮ ಬೂತ್‌ಗಳತ್ತ ತೆರಳಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 2,59,797 ಮತದಾರರಿದ್ದು, ಇದರಲ್ಲಿ 1,26,999 ಪುರುಷರು, 1,32,775 ಮಹಿಳೆಯರು ಮತ್ತು 23 ಇತರೆ ಮತದಾರರಿದ್ದಾರೆ. ಒಟ್ಟು 322 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1564 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು 2,500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More