AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್​​ ಪರ ಮತಯಾಚನೆ!

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್​​ ಪರ ಮತಯಾಚನೆ!

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Mar 29, 2026 | 1:17 PM

Share

ಬಾಗಲಕೋಟೆ ಉಪಚುನಾವಣಾ ಕಣ ರಂಗೇರಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿದ್ದಾರೆ. ಉಮೇಶ್ ಮೇಟಿ ಅವರಿಗೆ ಅನುಕಂಪದ ಅಲೆ ಇರುವುದನ್ನು ಮಲ್ಲಿಕಾರ್ಜುನ ಉಲ್ಲೇಖಿಸಿದ್ದಾರೆ.ಮುಖ್ಯಮಂತ್ರಿಗಳ ಪ್ರಚಾರದಿಂದ ಪಕ್ಷಕ್ಕೆ ಹೆಚ್ಚಿನ ಬಲ ಬರುತ್ತದೆ ಎಂದು ಅವರು ಹೇಳಿದ್ದಾರೆ.

ಬಾಗಲಕೋಟೆ, ಮಾರ್ಚ್​​ 29: ಉಪಚುನಾವಣಾ ಕಣ ರಂಗೇರಿದ್ದು, ಎಲ್ಲಾ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಸಹೋದರನ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿರುವುದು ವಿಶೇಷವಾಗಿದೆ. ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಅವರ ತಂದೆಯವರ ಅಕಾಲಿಕ ಮರಣದಿಂದಾಗಿ ಒಂದು ಸಹಾನುಭೂತಿಯ ಅಲೆ ಇದೆ. ಜನ ಅವರಿಗೆ ಮತ ಹಾಕಲು ನಿರ್ಧರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಮುಖ್ಯಮಂತ್ರಿಗಳು ಐದು ದಿನಗಳ ಕಾಲ ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲು ಬರುತ್ತಿದ್ದು, ಇದು ಪಕ್ಷಕ್ಕೆ ಮತ್ತಷ್ಟು ಬಲ ತರಲಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us