ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್ನಲ್ಲಿ ಸೀಜ್
ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಾವು ಜೋರಾಗತೊಡಗಿದೆ. ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನೂ ಘೋಷಣೆ ಮಾಡಿದೆ. ಇದೇ ಸಂದರ್ಭದಲ್ಲಿ ಚುನಾವಣಾ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮವೂ ಜೋರಾಗಿದೆ. ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 15.50 ಲಕ್ಷ ರೂ. ನಗದನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಬಾಗಲಕೋಟೆ, ಮಾರ್ಚ್ 19: ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಚೆಕ್‌ಪೋಸ್ಟ್‌ನಲ್ಲಿ ನಡೆದ ವಾಹನ ತಪಾಸಣೆಯ ವೇಳೆ, ಕೆಎ-28 ಎಎ-4833 ಸಂಖ್ಯೆಯ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಿಂದ ಕುಷ್ಟಗಿ ಕಡೆಗೆ ತೆರಳುತ್ತಿದ್ದ ಈ ಕಾರಿನಲ್ಲಿ ವಿಜಯ್ ಮೇಲಗಡೆ ಹಾಗೂ ಕುಮಾರ ಹಿರೇಮಠ ಎಂಬುವರು ಪ್ರಯಾಣಿಸುತ್ತಿದ್ದರು.
ಚುನಾವಣೆ ಹಿನ್ನಲೆಯಲ್ಲಿ ನಿಯೋಜಿಸಲಾದ ಫ್ಲೈಯಿಂಗ್ ಸ್ಕ್ವಾಡ್ ತಂಡವು ಬುಧವಾರ ಸಂಜೆ ಸುಮಾರು 7 ಗಂಟೆಯ ಸುಮಾರಿಗೆ ವಾಹನ ತಪಾಸಣೆ ನಡೆಸಿದಾಗ, ಯಾವುದೇ ಸರಿಯಾದ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ನಗದು ಪತ್ತೆಯಾಯಿತು. ತಕ್ಷಣವೇ ಹಣವನ್ನು ವಶಕ್ಕೆ ಪಡೆದು ಮುಂದಿನ ಪರಿಶೀಲನೆಗೆ ಒಪ್ಪಿಸಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
Published on: Mar 19, 2026 12:01 PM
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

