AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಉಪಚುನಾವಣೆ: ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!

ಬಾಗಲಕೋಟೆ ಉಪಚುನಾವಣೆ: ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Apr 09, 2026 | 1:00 PM

Share

ಬಾಗಲಕೋಟೆ ಉಪಚುನಾವಣೆಗಾಗಿ ಗೋವಾದಿಂದ ಮಾದಾಪುರ ಗ್ರಾಮಕ್ಕೆ 80ಕ್ಕೂ ಹೆಚ್ಚು ಮತದಾರರು ಎರಡು ಖಾಸಗಿ ಬಸ್‌ಗಳಲ್ಲಿ ಆಗಮಿಸಿ ಮತದಾನ ಮಾಡಿದ್ದಾರೆ. ದೂರದ ಊರಿನಲ್ಲಿದ್ದರೂ ಮತದಾನದ ಹಕ್ಕು ಚಲಾಯಿಸಲು ಬಂದ ಇವರ ಉತ್ಸಾಹ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸದ್ಯ, ಗೋವಾದಿಂದ ಬರುತ್ತಿರುವ ಮತ್ತು ಬಂದು ಮತ ಚಲಾಯಿಸಲು ಸರದಿಯಲ್ಲಿ ನಿಂತಿರುವ ವಿಡಿಯೋ ಇಲ್ಲಿದೆ.

ಬಾಗಲಕೋಟೆ, ಏಪ್ರಿಲ್ 9: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಕ್ಕು ಚಲಾಯಿಸಲು ಗೋವಾದಲ್ಲಿ ನೆಲೆಸಿದ್ದ ಕರ್ನಾಟಕದ ಮತದಾರರು ವಿಶೇಷ ಆಸಕ್ತಿ ತೋರಿದ್ದಾರೆ. ಕ್ಷೇತ್ರದ ವ್ಯಾಪ್ತಿಯ ಮಾದಾಪುರ ಗ್ರಾಮದ ಸುಮಾರು 70 ರಿಂದ 80 ಮತದಾರರು ಎರಡು ಖಾಸಗಿ ಬಸ್‌ಗಳ ಮೂಲಕ ಗೋವಾದಿಂದ ಸ್ವಗ್ರಾಮಕ್ಕೆ ಆಗಮಿಸಿದ್ದಾರೆ. ಉದ್ಯೋಗಕ್ಕಾಗಿ ಗೋವಾಕ್ಕೆ ವಲಸೆ ಹೋಗಿದ್ದ ಇವರು, ಮಾದಾಪುರ ಗ್ರಾಮದ ಮತಗಟ್ಟೆಗಳಲ್ಲಿ ಉತ್ಸಾಹದಿಂದ ಸರದಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More