AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು

ಬಾಗಲಕೋಟೆ: ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Apr 09, 2026 | 8:16 AM

Share

ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗಾಗಿ ಮತದಾನ ಪ್ರಕ್ರಿಯೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಹೆಚ್. ವೈ. ಮೇಟಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಪ್ರಮುಖ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇದು 2022ರ ಚುನಾವಣೆಗೆ ದಿಕ್ಸೂಚಿ ಎನ್ನಲಾಗಿದೆ.

ಬಾಗಲಕೋಟೆ, ಏಪ್ರಿಲ್ 9: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯುತ್ತಿದೆ. ಹೆಚ್. ವೈ. ಮೇಟಿ ಅವರ ಅಕಾಲಿಕ ನಿಧನದಿಂದ ತೆರವಾದ ಈ ಕ್ಷೇತ್ರಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಎರಡೂ ಪಕ್ಷಗಳ ಪ್ರಮುಖ ನಾಯಕರು ತೀವ್ರ ಪ್ರಚಾರ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರು ದಿನಗಳ ಕಾಲ ಕ್ಷೇತ್ರದಲ್ಲಿ ಬೀಡುಬಿಟ್ಟು ಪ್ರಚಾರ ಮಾಡಿದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಅನೇಕ ಘಟಾನುಘಟಿ ನಾಯಕರು ಪ್ರಚಾರದಲ್ಲಿ ಭಾಗಿಯಾಗಿದ್ದರು.

ಮತದಾರರು ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸುತ್ತಿದ್ದು, ಸರದಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಈ ಉಪಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದೆ. ಕ್ಷೇತ್ರದಲ್ಲಿ ಒಟ್ಟು 2,59,797 ಮತದಾರರಿದ್ದು, 322 ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆಯುತ್ತಿದೆ.

ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More