Car Blast Case: ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?

Updated on: Jul 26, 2026 | 3:18 PM

ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ XUV300 ಕಾರು ಸ್ಫೋಟಗೊಂಡ ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ, ಕಾರು ಸ್ಫೋಟದಲ್ಲಿ ಯಾವುದೇ ಸ್ಫೋಟಕ ವಸ್ತುಗಳ ಬಳಕೆಯ ಕುರುಹುಗಳು ಕಂಡುಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಾಗಲಕೋಟೆ, ಜುಲೈ 26: ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ XUV300 ಕಾರು ಸ್ಫೋಟಗೊಂಡ ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ, ಕಾರು ಸ್ಫೋಟದಲ್ಲಿ ಯಾವುದೇ ಸ್ಫೋಟಕ ವಸ್ತುಗಳ ಬಳಕೆಯ ಕುರುಹುಗಳು ಕಂಡುಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಕಮ್ ಮ್ಯಾನೇಜರ್ ಹನುಮಂತ ಅಥಣಿ ಅವರ ಕಾರು ನಿನ್ನೆ ಸಂಜೆ 4:30ಕ್ಕೆ ವೈನ್ ಸ್ಟೋರ್ ಎದುರು ನಿಲ್ಲಿಸಲಾಗಿತ್ತು. ರಾತ್ರಿ 10:45ರ ಸುಮಾರಿಗೆ ಕಾರು ಸ್ಫೋಟಗೊಂಡಿದೆ. ಘಟನೆಯ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ, ಎಸ್‌ಒಸಿಒ (Scene of Crime) ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿ.ಸಿ.ಟಿ.ವಿ. ದೃಶ್ಯಾವಳಿಗಳ ಪರಿಶೀಲನೆಯಲ್ಲಿ ಕಾರು ನಿಲ್ಲಿಸಿದ ನಂತರ ಯಾರೂ ಅದರ ಸಮೀಪ ಸುಳಿದಿಲ್ಲ ಎಂದು ತಿಳಿದುಬಂದಿದೆ. ಪ್ರಸ್ತುತ ತಾಂತ್ರಿಕ ದೋಷದಿಂದಾಗಿ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಎಸ್​ಪಿ ಸಿದ್ಧಾರ್ಥ್ ಗೋಯಲ್ ಭರವಸೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us