ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ ಕೆಎಸ್​ಆರ್​ಟಿಸಿ ಬಸ್: 12 ಮಂದಿಗೆ ಗಾಯ

Edited By:

Updated on: Oct 02, 2026 | 7:04 AM

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿಮನೆ ಘಟ್ಟದ ಬಳಿ ಕೆಎಸ್​ಆರ್​ಟಿಸಿ ಬಸ್ ಕಂದಕಕ್ಕೆ ಉರುಳಿಬಿದ್ದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ನಡೆದ ಈ ಅಪಘಾತದಲ್ಲಿ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಇದಾಗಿದ್ದು, ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರವಾರ, ಅಕ್ಟೋಬರ್ 2: ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ ಘಟನೆ ಗುರುವಾರ ರಾತ್ರಿ ನಡೆದಿದೆ. ಬಸ್‌ನಲ್ಲಿದ್ದ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಕುಮಟಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದೇವಿಮನೆ ಘಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಬಸ್ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಈ ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಕುಮಟಾ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ಕ್ರಮ ಕೈಗೊಳ್ಳಲಾಗಿದೆ.

ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಅಪಘಾತಕ್ಕೆ ನಿಖರ ಕಾರಣಗಳ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More