AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಸಾವು: ಅಸಲಿಗೆ ಆಗಿದ್ದೇನು? ಸಂಬಂಧಿಕರು ಹೇಳಿದ್ದೇನು? ನೋಡಿ

ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಸಾವು: ಅಸಲಿಗೆ ಆಗಿದ್ದೇನು? ಸಂಬಂಧಿಕರು ಹೇಳಿದ್ದೇನು? ನೋಡಿ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:May 17, 2025 | 5:25 PM

Share

ತಾಳಿ ಕಟ್ಟಿದ ಕೆಲವೇ ಕ್ಷಣಗಳ ನಂತರ, ಹೊಸ ಜೀವನಕ್ಕೆ ಕಾಲಿಟ್ಟಿದ್ದ ವರ ಪ್ರವೀಣ ಹೃದಯಾಘಾತದಿಂದ ನಿಧನರಾದರು. ಸಂಭ್ರಮದ ಕಲ್ಯಾಣ ಮಂಟಪ ದುಃಖದ ಸ್ಥಳವಾಗಿ ಮಾರ್ಪಟ್ಟಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ದುರಂತ ಘಟನೆಯು ಕುಟುಂಬಸ್ಥರಿಗೆ ಆಘಾತವನ್ನುಂಟುಮಾಡಿದೆ. ಹೊಸ ಜೀವನ ಕಾಲಿಟ್ಟಿದ್ದ ವರ ಮೃತಪಟ್ಟಿದ್ದು ಮಾತ್ರ ದುರದೃಷ್ಟಕರ.

ಬಾಗಲಕೋಟೆ, ಮೇ 17: ಬಾಗಲಕೋಟೆ ಜಿಲ್ಲೆ ಜಮಖಂಡಿ ‌ನಗರದ ನಂದಿಕೇಶ್ವರ ಕಲ್ಯಾಣಮಂಟಪದಲ್ಲಿ ಸೂತಕದ ಛಾಯೆ ಆವರಿಸಿದೆ. ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಪ್ರವೀಣ ಮೃತ ಮದುಮಗ. ಹೊಸ ಬಾಳಿಗೆ ಕಾಲಿಟ್ಟಿದ್ದ ಯುವಕ ಮಸಣ ಸೇರಿದ್ದು ಮಾತ್ರ ದುರದೃಷ್ಟಕರ ಸಂಗತಿಯಾಗಿದೆ. ಇನ್ನು, ಸಂಭ್ರಮದಿಂದ‌ ಇರಬೇಕಾದ ಕಲ್ಯಾಣಮಂಟಪ ಬಿಕೊ ಎನ್ನುತ್ತಿದೆ. ಜನರಿಗೆ ಮಾಡಿಸಿದ ಅಡುಗೆ ಮತ್ತು ಊಟ ಬಡಿಸಲು ತಂದಿದ್ದ ಪಾತ್ರೆ ಎಲ್ಲವನ್ನು ಸ್ಥಳಾಂತರಿಸಲಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Published on: May 17, 2025 03:50 PM
Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More