AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಬಡವರ ಸ್ವಂತ ಮನೆಯ ಕನಸು ಭಗ್ನ: 4 ವರ್ಷಗಳಾದರೂ ಪೂರ್ಣಗೊಳ್ಳದ 500 ಮನೆಗಳು

ಬಾಗಲಕೋಟೆಯಲ್ಲಿ ಬಡವರ ಸ್ವಂತ ಮನೆಯ ಕನಸು ಭಗ್ನ: 4 ವರ್ಷಗಳಾದರೂ ಪೂರ್ಣಗೊಳ್ಳದ 500 ಮನೆಗಳು

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Nov 05, 2026 | 9:47 PM

Share

ಬಾಗಲಕೋಟೆಯ ವಾಂಬೆ ಕಾಲೋನಿಯಲ್ಲಿ ಬಡವರಿಗಾಗಿ ನಿರ್ಮಿಸುತ್ತಿರುವ 500 ಮನೆಗಳ ಯೋಜನೆ ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಕಳಪೆ ಕಾಮಗಾರಿಯಿಂದ ಹಲವು ಮನೆಗಳು ಈಗಾಗಲೇ ಶಿಥಿಲಾವಸ್ಥೆ ತಲುಪಿವೆ. ಫಲಾನುಭವಿಗಳು ಹಣ ಪಾವತಿಸಿದ್ದರೂ ವಾಸಕ್ಕೆ ಮನೆಗಳಿಲ್ಲದೆ ಪರದಾಡುತ್ತಿದ್ದಾರೆ. ಅರ್ಧಕ್ಕೆ ನಿಂತಿರುವ ಈ ಮನೆಗಳು ಈಗ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿವೆ.

ಬಾಗಲಕೋಟೆ, ನ.5: ಜಿಲ್ಲೆಯ ಬಡ ಕೊಳಚೆ ಪ್ರದೇಶದ ನಿವಾಸಿಗಳಿಗಾಗಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ ನಿರ್ಮಿಸುತ್ತಿರುವ ಸುಮಾರು 500 ಮನೆಗಳ ಯೋಜನೆ ನಾಲ್ಕು ವರ್ಷಗಳಾದರೂ ಪೂರ್ಣಗೊಂಡಿಲ್ಲ. 2022ರಲ್ಲಿ ಅಂದಿನ ಶಾಸಕ ವೀರಣ್ಣ ಚರಂತಿಮಠ ಭೂಮಿ ಪೂಜೆ ನೆರವೇರಿಸಿದ್ದ ಈ ಮನೆಗಳು ಇಂದಿಗೂ ಅರ್ಧಕ್ಕೆ ನಿಂತಿವೆ. ಕಳಪೆ ಕಾಮಗಾರಿಯಿಂದಾಗಿ ಹಲವು ಮನೆಗಳ ಗೋಡೆಗಳು ಬಿರುಕು ಬಿಟ್ಟಿದ್ದು, ಕಬ್ಬಿಣದ ಸಲಾಕೆಗಳು ತುಕ್ಕು ಹಿಡಿದು ಅಸ್ಥಿಪಂಜರದಂತೆ ಗೋಚರಿಸುತ್ತಿವೆ. ಫಲಾನುಭವಿಗಳಿಂದ ₹55,000 ರಿಂದ ₹75,000 ಹಣವನ್ನು ಪಡೆದಿದ್ದರೂ, ಅವರಿಗೆ ಮನೆಗಳ ಹಸ್ತಾಂತರವಾಗಿಲ್ಲ. ಗುತ್ತಿಗೆದಾರರಿಗೆ ಸರಿಯಾಗಿ ಹಣ ಬಿಡುಗಡೆಯಾಗದ ಕಾರಣ ಕಾಮಗಾರಿ ನಿಂತು ಹೋಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಮನೆಗಳು ಅನೈತಿಕ ಚಟುವಟಿಕೆಗಳ ತಾಣವಾಗಿ ಬದಲಾಗಿವೆ. ಬಾಗಲಕೋಟೆ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರು ಅಧಿಕಾರಿಗಳಿಗೆ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಲು ಸೂಚನೆ ನೀಡಿದ್ದಾರೆ. ಬಡವರ ಹೊಸ ಮನೆಯ ಕನಸು ನನಸಾಗುವ ಲಕ್ಷಣಗಳು ಸದ್ಯಕ್ಕೆ ಕಾಣುತ್ತಿಲ್ಲ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More