AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲೂ ಸ್ಟಿಂಗ್, ಹನಿಟ್ರ್ಯಾಪ್ ಸದ್ದು: ವಿಜಯಾನಂದ‌ ಕಾಶಪ್ಪನವರ, ದೊಡ್ಡನಗೌಡ ಪಾಟೀಲ್​​ ಮಧ್ಯೆ ವಾಕ್ಸಮರ

ಬಾಗಲಕೋಟೆಯಲ್ಲೂ ಸ್ಟಿಂಗ್, ಹನಿಟ್ರ್ಯಾಪ್ ಸದ್ದು: ವಿಜಯಾನಂದ‌ ಕಾಶಪ್ಪನವರ, ದೊಡ್ಡನಗೌಡ ಪಾಟೀಲ್​​ ಮಧ್ಯೆ ವಾಕ್ಸಮರ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Nov 04, 2026 | 7:12 PM

Share

ಬಾಗಲಕೋಟೆ ಜಿಲ್ಲೆಯಲ್ಲಿ ಸ್ಟಿಂಗ್ ಮತ್ತು ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ವಿಜಯಾನಂದ ಕಾಶಪ್ಪನವರ್ ಮತ್ತು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ನಡುವೆ ತೀವ್ರ ವಾಕ್ಸಮರ ಶುರುವಾಗಿದೆ. ಕಾಶಪ್ಪನವರ್ ವಿಡಿಯೋ ಕುರಿತು ಆರೋಪ-ಪ್ರತ್ಯಾರೋಪಗಳು, ಕಮಿಷನ್ ದಂಧೆ, ಮರಳು ಮಾಫಿಯಾ ಹಾಗೂ ಇಳಕಲ್‌ನಲ್ಲಿನ ಹನಿಟ್ರ್ಯಾಪ್ ದಂಧೆಯ ಬಗ್ಗೆ ಪರಸ್ಪರ ವಾಗ್ದಾಳಿಗಳು ಮುಂದುವರೆದಿವೆ.

ಬಾಗಲಕೋಟೆ, ನವೆಂಬರ್​​ 04: ಸ್ಟಿಂಗ್ ಹಾಗೂ ಹನಿಟ್ರ್ಯಾಪ್ ವಿಚಾರವಾಗಿ ಬಾಗಲಕೋಟೆಯಲ್ಲೂ ಟಾಕ್ ವಾರ್ ಶುರುವಾಗಿದೆ. ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹಾಗೂ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ನಡುವೆ ವಾಕ್ಸಮರ ನಡೆದಿದೆ. ವಿಡಿಯೋ ಕಾಲ್ ವಿಚಾರ, ಹನಿಟ್ರ್ಯಾಪ್ ಆರೋಪದ ಬಗ್ಗೆ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. ವಿಜಯಾನಂದ ಕಾಶಪ್ಪನವರ್ ಯುವತಿಯೊಂದಿಗೆ ವಿಡಿಯೋ ಕಾಲ್​​ ಮಾತನಾಡಿರುವ ವಿಡಿಯೋ ಒಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ‘ಈ ವಿಡಿಯೋವನ್ನು ದೊಡ್ಡನಗೌಡ ಪಾಟೀಲ್ ದುರುದ್ದೇಶದಿಂದ ಹರಿಬಿಟ್ಟಿದ್ದಾರೆ ಎಂದು ಕಾಶಪ್ಪನವರ್ ಆರೋಪಿಸಿದ್ದಾರೆ. ಅಲ್ಲದೆ, ಮಾಧ್ಯಮಗಳಿಗೆ ಹಣ ನೀಡಿ ತಮ್ಮ ವಿರುದ್ಧ ಪ್ರಚಾರ ಮಾಡಿಸಿದ್ದಾರೆ’ ಎಂದೂ ಅವರು ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ದೊಡ್ಡನಗೌಡ ಪಾಟೀಲ್, ‘ತಾವು ಹಣ ನೀಡಿ ಪ್ರಸಾರ ಮಾಡಿಸಿದ್ದರೆ ದಾಖಲೆಗಳನ್ನು ಒದಗಿಸುವಂತೆ ಕಾಶಪ್ಪನವರ್‌ಗೆ ಸವಾಲು ಹಾಕಿದ್ದಾರೆ.’

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More