AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಅತಿಯಾದ ಸೌಂಡ್ ವಿರುದ್ಧ ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು

ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಅತಿಯಾದ ಸೌಂಡ್ ವಿರುದ್ಧ ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 21, 2026 | 10:54 PM

Share

ಬಾಗಲಕೋಟೆಯ ಮದೀನಾ ಕಾಲೋನಿಯಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಮತ್ತು ಜೋರಾದ ಅಜಾನ್ ಕೂಗಿದಕ್ಕೆ ಸ್ಥಳೀಯರು, ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಅತಿಯಾದ ಧ್ವನಿ ಮಾಲಿನ್ಯದ ಬಗ್ಗೆ ದೂರು ನೀಡಿ, ಕೂಡಲೇ ಕ್ರಮ ಕೈಗೊಳ್ಳುವಂತೆ ನಗರ ಠಾಣೆಗೆ ಮೌಖಿಕ ದೂರು ನೀಡಿದ್ದಾರೆ. ಪೊಲೀಸರು ಕ್ರಮದ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ತೆರಳಿದರು.

ಬಾಗಲಕೋಟೆ, ಆಗಸ್ಟ್​ 21: ನಗರದ ಮದೀನಾ ಕಾಲೋನಿಯಲ್ಲಿ ಯಾವುದೇ ಅಧಿಕೃತ ಅನುಮತಿ ಪಡೆಯದೆ ಅನಧಿಕೃತವಾಗಿ ಮಸೀದಿ ನಿರ್ಮಾಣ ಮಾಡಲಾಗಿದೆ ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೆ ಅತಿಯಾದ ಶಬ್ದದಲ್ಲಿ ಮೈಕ್ ಹಾಕಿ ಅಜಾನ್ ಕೂಗಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು, ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಾಗಲಕೋಟೆ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಈ ಭಾಗದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿದ್ದರೆ, ಸಾವಿರಾರು ಹಿಂದೂ ಕುಟುಂಬಗಳು ವಾಸಿಸುತ್ತಿದ್ದು, ಸುತ್ತಮುತ್ತ ಆಸ್ಪತ್ರೆಗಳೂ ಇರುವುದರಿಂದ ಜೋರಾದ ಅಜಾನ್‌ನಿಂದ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ದೂರಿದ ಕಾರ್ಯಕರ್ತರು, ಕೂಡಲೇ ಅನಧಿಕೃತ ಮಸೀದಿ ಹಾಗೂ ಮೈಕ್ ಶಬ್ದದ ಹಾವಳಿಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಮೌಖಿಕ ದೂರು ಸಲ್ಲಿಸಿದರು. ಬಳಿಕ ಸೌಂಡ್ ಕಡಿಮೆ ಮಾಡಿಸುವ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More