ತಾವೇ ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?

Updated on: Jan 15, 2026 | 7:20 PM

ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ಹೆಸರು ಗಳಿಸಿದ್ದ ವೃದ್ಧೆ ಚಂದ್ರವ್ವಳನ್ನು ಆಕೆಯ ಅಣ್ಣನ ಮಕ್ಕಳೇ ಹತ್ಯೆ ಮಾಡಿದ ಘಟನೆ ರಬಕವಿ ಬನಹಟ್ಟಿ (Rabkavi Banhatti) ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದಿದೆ. ಆರೋಪಿಗಳು ತಮ್ಮ ಅತ್ತೆಯನ್ನು ಜಗದಾಳ ಬಳಿಯ ಘಟಪ್ರಭಾ ಕಾಲುವೆಗೆ ತಳ್ಳಿದ್ದರು. ಬಳಿಕ ಜನರು ಬರುತ್ತಿದ್ದಂತೆ ಕಾಪಾಡುವ ನಾಟಕ ಆಡಿದ್ದರು. ಇನ್ನು ಈ ಬಗ್ಗೆ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್‌ ಅವರು ಮತ್ತಷ್ಟು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಬಾಗಲಕೋಟೆ, (ಜನವರಿ 15): ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ಹೆಸರು ಗಳಿಸಿದ್ದ ವೃದ್ಧೆ ಚಂದ್ರವ್ವಳನ್ನು ಆಕೆಯ ಅಣ್ಣನ ಮಕ್ಕಳೇ ಹತ್ಯೆ ಮಾಡಿದ ಘಟನೆ ರಬಕವಿ ಬನಹಟ್ಟಿ (Rabkavi Banhatti) ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದಿದೆ. ಆರೋಪಿಗಳು ತಮ್ಮ ಅತ್ತೆಯನ್ನು ಜಗದಾಳ ಬಳಿಯ ಘಟಪ್ರಭಾ ಕಾಲುವೆಗೆ ತಳ್ಳಿದ್ದರು. ಬಳಿಕ ಜನರು ಬರುತ್ತಿದ್ದಂತೆ ಕಾಪಾಡುವ ನಾಟಕ ಆಡಿದ್ದರು. ನಂತರ ಶವವನ್ನು ತೆಗೆದು ಅವಸರದಲ್ಲಿ ಅಂತ್ಯಸಂಸ್ಕಾರ ಮಾಡಲು ಸಂಬಂಧಿಕರು ವ್ಯವಸ್ಥೆ ಮಾಡಿದ್ದರು. ಇದರಿಂದ ಸ್ಥಳೀಯರಿಗೆ ಸಂಶಯ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬನಹಟ್ಟಿ ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಇನ್ನು ಈ ಬಗ್ಗೆ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್‌ ಅವರು ಮತ್ತಷ್ಟು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ತರಕಾರಿ ಮಾರಿ ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಅಣ್ಣನ ಮಕ್ಕಳಿಂದಲೇ ಬರ್ಬರ ಹತ್ಯೆ