ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಘಟನೆಗೆ ಕಾರಣ ಬಿಚ್ಚಿಟ್ಟ ಎಸ್ಪಿ

Edited By:

Updated on: Feb 20, 2026 | 7:32 AM

ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮೆರವಣಿಗೆ ವೇಳೆ ಕಿಲಾ ಓಣಿ ಬಳಿ ಕಲ್ಲು, ಚಪ್ಪಲಿ ತೂರಾಟ ಘಟನೆ ಬಗ್ಗೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಮಾಹಿತಿ ನೀಡಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಲಾಗಿದ್ದು, ಸಾರ್ವಜನಿಕರಿಗೆ ಯಾವುದೇ ಹಾನಿಯಾಗಿಲ್ಲ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ವಿಡಿಯೋ ಪರಿಶೀಲಿಸಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಬಾಗಲಕೋಟೆ, ಫೆಬ್ರವರಿ 20: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಕಿಲಾ ಓಣಿ ಬಳಿ ಕಲ್ಲು ಹಾಗೂ ಚಪ್ಪಲಿ ತೂರಾಟ ಘಟನೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಪರಿಸ್ಥಿತಿ ಪ್ರಸ್ತುತ ನಿಯಂತ್ರಣದಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲುಗಳು ಮತ್ತು ಒಂದು ಚಪ್ಪಲಿ ತೂರಲಾಗಿದೆ. ಆದರೆ, ಸಾರ್ವಜನಿಕರಿಗೆ ಅಥವಾ ಶಿವಾಜಿ ಭಾವಚಿತ್ರಕ್ಕೆ ಯಾವುದೇ ಹಾನಿಯಾಗಿಲ್ಲ,ಬದಲಾಗಿ ಪೊಲೀಸರ ಮೇಲೆ ಕಲ್ಲು ಬಿದ್ದಿದೆ. ಘಟನೆ ಹಿಂದೆ ಯಾವುದೇ ಕೋಮು ಕಾರಣಗಳಿಲ್ಲ ಎಂದು ತಿಳಿಸಿದ್ದಾರೆ. ಘಟನೆಯ ನಂತರ ಹೆಚ್ಚುವರಿ ಭದ್ರತೆಯನ್ನು ಒದಗಿಸಲಾಗಿದೆ. ಘಟನೆಗೆ ಸಂಬಂಧಿಸಿದ ವೀಡಿಯೊಗಳನ್ನು ಪರಿಶೀಲಿಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More