ಬಾಗಲಕೋಟೆಯಲ್ಲಿ ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ; ಭಯಾನಕ ವಿಡಿಯೋ

Edited By:

Updated on: Mar 28, 2026 | 2:23 PM

ಬಾಗಲಕೋಟೆಯಲ್ಲಿ ಆಂಬುಲೆನ್ಸ್ ಮತ್ತು ಇನ್ನೋವಾ ಕಾರು ಡಿಕ್ಕಿಯಾಗಿ ಆಂಬುಲೆನ್ಸ್ ಪಲ್ಟಿಯಾಗಿದೆ. ಗರ್ಭಿಣಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯದಲ್ಲಿ, ಸ್ಥಳೀಯ ಯುವಕರು ಸಮಯಪ್ರಜ್ಞೆ ಮೆರೆದು ಗರ್ಭಿಣಿ ಮಹಿಳೆಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬಾಗಲಕೋಟೆ, ಮಾ.28: ನಗರದ ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮತ್ತು ಇನ್ನೋವಾ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿ, ಆಂಬುಲೆನ್ಸ್ ರಸ್ತೆಯಲ್ಲೇ ಪಲ್ಟಿಯಾದ ಘಟನೆ ಬಾಗಲಕೋಟೆಯ ಬಸ್ ನಿಲ್ದಾಣದ ಸರ್ಕಲ್ ಬಳಿ ನಡೆದಿದೆ. ಜಿಲ್ಲಾಸ್ಪತ್ರೆಯ ಕಡೆಗೆ ವೇಗವಾಗಿ ಹೊರಟಿದ್ದ ಆಂಬುಲೆನ್ಸ್ ಮತ್ತು ಕಾಳಿದಾಸ ವೃತ್ತದ ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ ವಾಹನವು ರಸ್ತೆಯ ಮಧ್ಯದಲ್ಲೇ ಪಲ್ಟಿಯಾಗಿದೆ. ಈ ದೃಶ್ಯವು ಹತ್ತಿರದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿದ್ದ ಸ್ಥಳೀಯ ಯುವಕರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಪಲ್ಟಿಯಾದ ಆಂಬುಲೆನ್ಸ್‌ನಲ್ಲಿದ್ದ ಗರ್ಭಿಣಿ ಮಹಿಳೆಯನ್ನು ಅತ್ಯಂತ ಜಾಗರೂಕತೆಯಿಂದ ಹೊರತೆಗೆದು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಾಹನದಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ತೀವ್ರತೆಗೆ ಎಲ್ಲರೂ ಗಾಬರಿಗೊಂಡಿದ್ದರು. ಘಟನಾ ಸ್ಥಳಕ್ಕೆ ಬಾಗಲಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವನಗರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More