ಬಾಗಲಕೋಟೆ: ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಸ್ಲೀಪರ್ ಬಸ್, ಪ್ರಯಾಣಿಕರು ಜಸ್ಟ್ ಮಿಸ್
ಬಾಗಲಕೋಟೆಯ ಹಳೆ ನಗರದ ಅಂಬೇಡ್ಕರ್ ಮೂರ್ತಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಸ್ಲೀಪರ್ ಬಸ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಐದಾರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾಗಲಕೋಟೆ, ಏಪ್ರಿಲ್ 14: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಖಾಸಗಿ ಸ್ಲೀಪರ್ ಬಸ್ಸೊಂದು ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಘಟನೆ ಹಳೆ ಬಾಗಲಕೋಟೆ ನಗರದ ಅಂಬೇಡ್ಕರ್ ಮೂರ್ತಿ ಬಳಿ ನಡೆದಿದೆ. ಈ ಬಸ್ ಬೆಳಿಗ್ಗೆ ಬೆಂಗಳೂರಿನಿಂದ ಬಾಗಲಕೋಟೆಗೆ ಆಗಮಿಸುತ್ತಿತ್ತು. ಅದೃಷ್ಟವಶಾತ್, ಭಾರಿ ಅನಾಹುತ ತಪ್ಪಿದೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಸುಮಾರು ಐದರಿಂದ ಆರು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗಾಯಾಳುಗಳಿಗೆ ವೈದ್ಯಕೀಯ ನೆರವು ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

