ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ
ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ಪ್ರತಾಪ್ ಸಿಂಹ ಅವರು ಸಿದ್ರಾಮಯ್ಯ ಅವರ ಮಾಂಸ ಸೇವನೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ಯುಗಾದಿ, ದೀಪಾವಳಿ ದಿನಗಳಲ್ಲಿ ಮಾಂಸ ಸೇವನೆಯನ್ನು ಬಹಿರಂಗಪಡಿಸುವುದು ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡುತ್ತದೆ ಎಂದು ಸಿಂಹ ತಿಳಿಸಿದರು. ಡಾ. ಚರಂತಿ ಮಟ್ಟ ಅವರಿಗೆ ಮತ ನೀಡಿ, ಜಾತಿ ಮರೆತು ಹಿಂದೂಗಳಾಗಿ ಒಗ್ಗಟ್ಟಿನಿಂದ ಮತ ಚಲಾಯಿಸಲು ಕರೆ ನೀಡಿದರು.
ಬಾಗಲಕೋಟೆ, ಏಪ್ರಿಲ್ 03: ಏ.9ರಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಐಹೊಳೆ ಗ್ರಾಮದಲ್ಲಿ ಬಿಜೆಪಿ ಪ್ರಚಾರ ಸಭೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ ಯುಗಾದಿ ಹಬ್ಬದಂದೂ ಮಾಂಸ ತಿಂತೀನಿ ಅಂತಾರೆ. ಸಿದ್ರಾಮಣ್ಣ ನೀನು ಮಾಂಸನಾದ್ರೂ ತಿನ್ನು, ಸುನ್ನತ್ ಆದರೂ ಮಾಡಿಕೋ, ಏನ್ಬೇಕಾದರೂ ಮಾಡು ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ನೀನು ಯುಗಾದಿ, ದೀಪಾವಳಿ ಹಬ್ಬಕ್ಕೆ ಮಾಂಸ ತಿಂತೀನಿ ಅಂದರೆ 15% ಮುಸ್ಲಿಮರನ್ನು ಓಲೈಸಲು ಹಿಂದೂಗಳ ಭಾವನೆಗೆ ಧಕ್ಕೆ ತಂದಂತೆ. 85% ಹಿಂದೂಗಳಿದ್ದರೂ ಹರಿದು ಹಂಚಿ ಹೋಗಿದ್ದಾರೆ. ಗೌಡ, ಲಿಂಗಾಯತ, ಕುರುಬ, ವಾಲ್ಮೀಕಿ, ದಲಿತರು ವಿಭಜನೆಯಾಗಿದೆ. ಹಿಂದೂಗಳು ಉಳಿಯಬೇಕು ಅಂದ್ರೆ ಒಗ್ಗಟ್ಟಾಗಬೇಕು ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

