AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಚಾಲಕ: ಎದೆ ಝಲ್ ಎನ್ನುವ​ ವಿಡಿಯೋ

ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಚಾಲಕ: ಎದೆ ಝಲ್ ಎನ್ನುವ​ ವಿಡಿಯೋ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Oct 21, 2026 | 9:24 PM

Share

ಮುಖ್ಯಾಂಶಗಳು

  • ಕಾರು ರಿವರ್ಸ್​ ತೆಗೆಯುವಾಗ ಬೈಕ್​ ಸವಾರನಿಗೆ ಡಿಕ್ಕಿ
  • ಇಳಕಲ್​ನ ಜಿಯೋ ಪೆಟ್ರೋಲ್ ಬಂಕ್​​​ನಲ್ಲಿ ಅಪಘಾತ
  • ಬೈಕ್ ಸವಾರರ ಸ್ಥಿತಿ ಗಂಭೀರ

ಬಾಗಲಕೋಟೆ ಜಿಲ್ಲೆಯ ಇಳಕಲ್‌ನ ಜಿಯೋ ಪೆಟ್ರೋಲ್ ಬಂಕ್‌ನಲ್ಲಿ ಕಾರ್ ರಿವರ್ಸ್ ತೆಗೆದುಕೊಳ್ಳುವಾಗ ಬೈಕ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರರಾದ ಬಸನಗೌಡ, ಸಿದ್ದನಗೌಡ ಗಂಭೀರ ಗಾಯಗೊಂಡಿದ್ದಾರೆ. ಬ್ರೇಕ್ ಬದಲಿಗೆ ಎಕ್ಸ್‌ಲೇಟರ್ ತುಳಿದ ಕಾರ್ತಿಕ್‌ನಿಂದ ಘಟನೆ ನಡೆದಿದೆ. ಪೆಟ್ರೋಲ್ ಸೋರಿಕೆಯಾಗಿದ್ದರೂ, ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಭಾರಿ ಸ್ಫೋಟ ತಪ್ಪಿ ದೊಡ್ಡ ದುರಂತ ನಿವಾರಣೆಯಾಗಿದೆ.

ಬಾಗಲಕೋಟೆ, ಅಕ್ಟೋಬರ್​ 21: ಜಿಲ್ಲೆಯ ಇಳಕಲ್​​ನಲ್ಲಿರುವ​ ಜಿಯೋ ಪೆಟ್ರೋಲ್​ ಬಂಕ್​​​ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ರಿವರ್ಸ್​ ತೆಗೆಯುವಾಗ ಬೈಕ್​ ಸವಾರನಿಗೆ ಡಿಕ್ಕಿ ಹೊಡೆದಿದೆ. ಇಳಕಲ್​ನ ಕಾರ್ತಿಕ್ ಎಂಬುವರಿಗೆ ಸೇರಿದ ಕಾರು ಇದಾಗಿದ್ದು, ಬ್ರೇಕ್ ಬದಲು ಎಕ್ಸ್​ಲೇಟರ್ ತುಳಿದಿದ್ದರಿಂದ ಅವಘಡ ಸಂಭವಿಸಿದೆ. ಬೈಕ್ ಸವಾರರಾದ ಬಸನಗೌಡ ಮತ್ತು ಸಿದ್ದನಗೌಡ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್​ಗೆ​ ಡಿಕ್ಕಿ ಬಳಿಕ ಬಂಕ್​ನ ಇಂಧನದ ಡಿಸ್ಪೆನ್ಸರ್​ಗೆ ಡಿಕ್ಕಿ ಹೊಡೆದಿದೆ. ಬಂಕ್ ಮತ್ತು ಯಂತ್ರಗಳ ಮೇಲೆ ನೀರು ಸಿಂಪಡಿಸಿ ಬೆಂಕಿ ಹೊತ್ತಿಕೊಳ್ಳದಂತೆ ಸಿಬ್ಬಂದಿ ತಡೆದಿದ್ದಾರೆ. ಸ್ಥಳದಲ್ಲಿ ಪೆಟ್ರೋಲ್ ಸೋರಿದೆ. ಒಂದು ವೇಳೆ ಬೆಂಕಿ ಹೊತ್ತಿಕೊಂಡಿದ್ದರೆ ಭಾರೀ ಸ್ಫೋಟ ಸಂಭವಿಸುವ ಸಾಧ್ಯತೆಯಿತ್ತು. ಆದರೆ ಅದೃಷ್ಟವಶಾತ್ ಘೋರ ದುರಂತ ತಪ್ಪಿದೆ. ಸ್ಥಳಕ್ಕೆ ಇಳಕಲ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಘಟನೆಯ ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎದೆ ಝಲ್​ ಎನಿಸುವಂತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Oct 21, 2026 09:23 PM

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More