ಹೋದ ಜೀವ ವಾಪಸ್‌ ಕೊಡ್ತೀರಾ? ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ

Edited By:

Updated on: Mar 01, 2026 | 4:56 PM

ಬಾಗಲಕೋಟೆಯ ಬನಹಟ್ಟಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಕೆ.ಎಸ್. ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಶಿವಮೊಗ್ಗ ಹತ್ಯೆ ಪ್ರಕರಣ, ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲಿನ ಕ್ರಮ ಮತ್ತು ಮಸೀದಿಗಳಿಗೆ ಸಂಬಂಧಿಸಿದಂತೆ ಎಚ್ಚರಿಕೆಗಳನ್ನು ನೀಡಿದ ಅವರು, ಕರ್ನಾಟಕವನ್ನು ಕೇಸರಿಮಯ ರಾಜ್ಯವನ್ನಾಗಿ ಮಾಡುವಂತೆ ಕರೆ ನೀಡಿದರು.

ಬಾಗಲಕೋಟೆ, ಮಾರ್ಚ್​​ 01: ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಕಾಂಗ್ರೆಸ್​ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಮಸೀದಿಗಳಿಂದ ಕಲ್ಲು ತೂರಾಟ ನಡೆದರೆ ಅವುಗಳನ್ನು ಸೀಜ್ ಮಾಡಿ, ಮುಲ್ಲಾನನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ, ಬಾಬರಿ ಮಸೀದಿ ಧ್ವಂಸವಾದಂತೆ ಕರ್ನಾಟಕದಲ್ಲಿಯೂ ಹಲವು ಮಸೀದಿಗಳು ಧ್ವಂಸವಾಗುವ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Mar 01, 2026 04:54 PM
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More