ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ನಿಮಗೆ ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್

Edited By:

Updated on: Feb 20, 2026 | 5:25 PM

ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಮಸೀದಿ ಮುಂದೆ ಕಲ್ಲು ಹಾಗೂ ಚಪ್ಪಲಿ ಎಸೆದಿರೋದು ಕೋಮು ಉದ್ವಿಗ್ನತೆ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೇ ಕೆಲ ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಇದರಿಂದ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇನ್ನೊಂದೆಡೆ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಮುಖಂಡರು, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಸ್ಥಳಕ್ಕೆ ಬಂದ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಎದುರು ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಗರಂ ಆಗಿದ್ದು, ನಿಮಗೆ ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಬಾಗಲಕೋಟೆ, (ಫೆಬ್ರವರಿ 20): ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಮಸೀದಿ ಮುಂದೆ ಕಲ್ಲು ಹಾಗೂ ಚಪ್ಪಲಿ ಎಸೆದಿರೋದು ಕೋಮು ಉದ್ವಿಗ್ನತೆ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೇ ಕೆಲ ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಇದರಿಂದ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇನ್ನೊಂದೆಡೆ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಮುಖಂಡರು, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಸ್ಥಳಕ್ಕೆ ಬಂದ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಎದುರು ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಗರಂ ಆಗಿದ್ದು, ನಿಮಗೆ ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: 8 ಆರೋಪಿಗಳ ಬಂಧನ!

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More