ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು

Edited By:

Updated on: Feb 20, 2026 | 6:45 PM

ಬಾಗಲಕೋಟೆಯಲ್ಲಿ (Bagalkot) ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ (Stone Pelting) ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಇನ್ನು ಪೊಲೀಸರು ಇಂದು (ಫೆಬ್ರವರಿ 20) ಡಿಸಿ ಕಚೇರಿಯಲ್ಲಿ ಕರೆದಿದ್ದ ಶಾಂತಿ ಸಭೆಗೆ ಮುಸ್ಲಿಂ ಮುಖಂಡರು ಗೈರಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಹಿಂದೂ ಮುಖಂಡರು ಸಹ ಶಾಂತಿ ಸಭೆ ಬಹಿಷ್ಕರಿಸಿ ಹೊರ ನಡೆದಿದ್ದಾರೆ.

ಬಾಗಲಕೋಟೆ, (ಫೆಬ್ರವರಿ 20): ಬಾಗಲಕೋಟೆಯಲ್ಲಿ (Bagalkot) ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ (Stone Pelting) ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಇನ್ನು ಪೊಲೀಸರು ಇಂದು (ಫೆಬ್ರವರಿ 20) ಡಿಸಿ ಕಚೇರಿಯಲ್ಲಿ ಕರೆದಿದ್ದ ಶಾಂತಿ ಸಭೆಗೆ ಮುಸ್ಲಿಂ ಮುಖಂಡರು ಗೈರಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಹಿಂದೂ ಮುಖಂಡರು ಸಹ ಶಾಂತಿ ಸಭೆ ಬಹಿಷ್ಕರಿಸಿ ಹೊರ ನಡೆದಿದ್ದಾರೆ.

ಇದೇ ವೇಳೆ ಟಿವಿ9ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ, ಕೇವಲ ನಮ್ಮನ್ನ ಮಾತ್ರ ಶಾಂತಿ ಸಭೆಗೆ ಕರೆದಿದ್ದಾರೆ. ಮುಸ್ಲಿಂ ಸುಮುದಾಯದ ಮುಖಂಡರು ಸಭೆಗೆ ಹಾಜಾರಾಗಿಲ್ಲ. ಶಾಂತಿ ಸಭೆ ಅಂದರೆ ಎರಡು ಕಡೆಯವರು ಇರಬೇಕು. ಅವರಿಗೆ ಶಾಂತಿ ಬೇಕಿಲ್ಲ. ಹಾಗಾಗಿ ಅವರು ಬಂದಿಲ್ಲ. ಡಿಸಿ,ಎಸ್ ಪಿ ಎಲ್ಲರೂ ಕರೆದ ಸಭೆಗೆ ಅವರು ಬರೋದಿಲ್ಲ ಅಂದರೆ ಎಷ್ಟಿರಬೇಕು? ಅದಕ್ಕೆ ಹೇಳೋದು ಇದು ಕಾಂಗ್ರೆಸ್ ಓಲೈಕೆಯ ಪರಿಣಾಮ ಅಂತ. ನಾವು ಯಾವುದಕ್ಕೂ ಸುಮ್ಮನೆ ಇರುವುದಿಲ್ಲ. ಎಲ್ಲಿ ಶಿವಾಜಿ ಮೂರ್ತಿಗೆ ಕಲ್ಲು ಹೊಡೆದಿದ್ದಾರೆ ಅದೇ ಜಾಗದಿಂದ ಪುಷ್ಪಗಳ ವೃಷ್ಟಿಗೈದು ಶಿವಾಜಿ ಮೆರವಣಿಗೆ ಮಾಡುತ್ತೇವೆ. ಯಾವಾಗ ಶಿವಾಜಿ‌ ಮೆರವಣಿಗೆ ಮಾಡುತ್ತೇವೆ ಎನ್ನುವುದನ್ನು ನಂತರ ತಿಳಿಸುತ್ತೇವೆ ಎಂದರು.

ಇದನ್ನೂ ಓದಿ: ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: ಬಾಗಲಕೋಟೆ ಉದ್ವಿಗ್ನ

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More