ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಮುಧೋಳದಲ್ಲಿ ಕಬ್ಬಿಗೆ 3,500 ರೂ ಬೆಲೆಗೆ ಆಗ್ರಹಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು 3,300 ರೂ ನಿಗದಿಪಡಿಸಿದ್ದರೂ ರೈತರು ಒಪ್ಪಿ ತಯಾರಿಲ್ಲ. ತಮ್ಮ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ, ಸಮೀರ್‌ವಾಡಿ-ಗೋದಾವರಿ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯನ್ನು ಉರುಳಿಸಿ ಬೆಂಕಿ ಹಚ್ಚುವ ಮೂಲಕ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆ, ನವೆಂಬರ್ 13: ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಬ್ಬಿಗೆ ಪ್ರತಿ ಟನ್‌ಗೆ 3,500 ರೂ ನಿಗದಿಪಡಿಸಬೇಕು ಎಂದು ರೈತರು ಆಗ್ರಹಿಸುತ್ತಿದ್ದಾರೆ. ಆದರೆ, ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರು 3,300 ರೂ ಬೆಲೆ ನಿಗದಿಪಡಿಸಿದ್ದು, ಸರ್ಕಾರ ಹೆಚ್ಚುವರಿಯಾಗಿ 50 ಹಾಗೂ ಕಾರ್ಖಾನೆಗಳು 50 ರೂ ನೀಡಲು ಒಪ್ಪಿವೆ. ಈ ನಿರ್ಧಾರವನ್ನು ಗುರಲಾಪುರದಲ್ಲಿ ಕೆಲ ರೈತರು ಒಪ್ಪಿಕೊಂಡರೂ, ಮುಧೋಳದ ರೈತರು ಮಾತ್ರ 3,500 ರೂ. ಬೇಡಿಕೆಗೆ ಪಟ್ಟು ಹಿಡಿದಿದ್ದು, ಟ್ರ್ಯಾಕ್ಟರ್, ಬೈಕ್ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 13, 2025 06:44 PM
