ವಿಕೋಪಕ್ಕೆ ತಿರಗಿದ ಕಬ್ಬು ಬೆಳೆಗಾರರ ಹೋರಾಟ: ಕಿಡಿಗೇಡಿಗಳಿಂದ ಕಲ್ಲು ತೂರಾಟ
ಬಾಗಲಕೋಟೆಯ ಜಮಖಂಡಿ ತಾಲೂಕಿನ ಸಿದ್ದಾಪುರದಲ್ಲಿ ಕಬ್ಬು ಬೆಳೆಗಾರ ರೈತರ ಹೋರಾಟ ವಿಕೋಪಕ್ಕೆ ತಿರುಗಿದೆ. ಬಾಕಿ ಬಿಲ್ ಪಾವತಿ ಮತ್ತು ಕಬ್ಬಿನ ದರ ನಿಗದಿಗಾಗಿ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಎದುರು ನಡೆದ ಪ್ರತಿಭಟನೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿದೆ. ಕಾರ್ಖಾನೆ ಆವರಣದಲ್ಲಿದ್ದ ವಾಹನಗಳು ಹಾಗೂ ಕಚೇರಿ ಗಾಜುಗಳು ಪುಡಿಪುಡಿಯಾಗಿವೆ.
ಬಾಗಲಕೋಟೆ, ನವೆಂಬರ್ 03: ಬಾಕಿ ಬಿಲ್ ಪಾವತಿ, ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರೈತರು ನಡೆಸಿದ್ದ ಹೋರಾಟ ವಿಕೋಪಕ್ಕೆ ತಿರುಗಿದ್ದು ಕಿಡಿಗೇಡಿಗಳಿಂದ ಕಲ್ಲು ತೂರಾಟ ಮಾಡಿರುವಂತಹ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿಯಿರುವ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ನಡೆದಿದೆ. ಕಾರ್ಖಾನೆ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳು ಮತ್ತು ಕಚೇರಿ ಮೇಲೆ ಕಲ್ಲೆಸೆಯಲಾಗಿದ್ದು, ಬೊಲೆರೊ ವಾಹನ ಸೇರಿ ಹಲವು ವಾಹನಗಳ ಗಾಜು ಪುಡಿಪುಡಿ ಆಗಿವೆ. ಸದ್ಯ ಕಬ್ಬು ಬೆಳೆಗಾರ ರೈತರ ಪ್ರತಿಭಟನೆ ಶಾಂತ ಸ್ಥಿತಿಗೆ ಮರಳಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 03, 2025 07:28 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

