ಬಾಗಲಕೋಟೆ ಕಬ್ಬು ಬೆಳೆಗಾರರ ಹೋರಾಟ ಕೇಸ್ಗೆ ಟ್ವಿಸ್ಟ್: ಬೆಂಕಿ ಹಚ್ಚುತ್ತಿರುವ ವಿಡಿಯೋ ವೈರಲ್
ಬಾಗಲಕೋಟೆಯ ಮುಧೋಳದಲ್ಲಿ ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ನಡೆಯುತ್ತಿದ್ದ ರೈತರ ಪ್ರತಿಭಟನೆ ವಿಕೋಪಕ್ಕೆ ತಿರುಗಿ, 20ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆ ಸಂಬಂಧ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಎಫ್‌ಐಆರ್‌ಗಳು ದಾಖಲಾಗಿದ್ದು, 150ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬಾಗಲಕೋಟೆ, ನವೆಂಬರ್ 16: ನವೆಂಬರ್ 13ರಂದು ಬಾಗಲಕೋಟೆಯ ಮುಧೋಳದಲ್ಲಿ ಕಬ್ಬಿನ ಬೆಂಬಲ ಬೆಲೆಗಾಗಿ ನಡೆಯುತ್ತಿದ್ದ ಪ್ರತಿಭಟನೆ ವಿಕೋಪಕ್ಕೆ ತಿರುಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಿಂಗಪುರ ಠಾಣೆಯಲ್ಲಿ ಮೂರು ಪ್ರತ್ಯೇಕ FIR ದಾಖಲಾಗಿವೆ. ಅಷ್ಟೇ ಅಲ್ಲದೆ ಕೇಸ್ಗೆ ಟ್ವಿಸ್ಟ್ ಒಂದು ಸಿಕ್ಕಿದ್ದು, ಬೆಂಕಿ ಹಚ್ಚುತ್ತಿರುವ ವಿಡಿಯೋ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

