ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಫ್ಯಾನ್ಸ್ ವಿಶೇಷ ಹರಕೆ
ಜಮಖಂಡಿಯಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ಬಾಗಲಕೋಟೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕುಮಾರ್ ಆಲಗೂರು ಮತ್ತು ಬೆಂಬಲಿಗರು ಕಲ್ಲಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಾವಿರದ ಒಂದು ತೆಂಗಿನಕಾಯಿಗಳನ್ನು ಒಡೆದು ಪ್ರಾರ್ಥಿಸಲಾಯಿತು. ಕಾಂಗ್ರೆಸ್ ಪಕ್ಷಕ್ಕೆ ಡಿಕೆ ಶಿವಕುಮಾರ್ ಅವರ 50 ವರ್ಷಗಳ ಸೇವೆಯನ್ನು ಸ್ಮರಿಸಿ, ಆಯುಷ್ಯ-ಆರೋಗ್ಯಕ್ಕಾಗಿ ದೇವರಲ್ಲಿ ಬೇಡಿಕೊಳ್ಳಲಾಯಿತು.
ಬಾಗಲಕೋಟೆ, ನವೆಂಬರ್ 23: ಬಾಗಲಕೋಟೆ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ವತಿಯಿಂದ ಜಮಖಂಡಿಯ ಕಲ್ಲಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಬಾಗಲಕೋಟೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕುಮಾರ್ ಆಲಗೂರು ಅವರ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅನೇಕ ಅಭಿಮಾನಿಗಳು ಮತ್ತು ಕಾರ್ಯಕರ್ತರು ಈ ಪೂಜೆಯಲ್ಲಿ ಭಾಗವಹಿಸಿದ್ದರು. ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಸಾವಿರದ ಒಂದು ತೆಂಗಿನಕಾಯಿಗಳನ್ನು ಒಡೆಯುವ ಮೂಲಕ ದೇವರಿಗೆ ಪ್ರಾರ್ಥನೆ ಮಾಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

