‘ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​’ ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!

Updated on: Jan 03, 2026 | 12:13 PM

ಬಾಗಲಕೋಟೆ ಜಿಲ್ಲೆಯ ಬುದ್ನಿ ಪಿಎಂ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಅಚ್ಚುಮೆಚ್ಚಿನ ಶಿಕ್ಷಕರ ವರ್ಗಾವಣೆಯನ್ನು ಸಹಿಸಲಾಗದೆ ಶಾಲಾ ಮಕ್ಕಳು ಗೊಳೋ ಎಂದು ಕಣ್ಣೀರಿಟ್ಟಿದ್ದಾರೆ. ಶಿಕ್ಷಕರಾದ ವೆಂಕಟೇಶ್ ಪಾಟೀಲ್ ಹಾಗೂ ಬಿಜಿ ರಾಮನಗೌಡ ಪಾಟೀಲ್ ಅವರು ಬೇರೆಡೆಗೆ ವರ್ಗಾವಣೆಯಾಗಿದ್ದು, ಇದರ ಹಿನ್ನೆಲೆಯಲ್ಲಿ ಮಕ್ಕಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಆಳವಾದ ಬಾಂಧವ್ಯವನ್ನು ಇದು ಎತ್ತಿ ತೋರಿಸುತ್ತದೆ. ಮಕ್ಕಳಷ್ಟೇ ಅಲ್ಲದೆ, ಗ್ರಾಮಸ್ಥರು ಕೂಡ ವರ್ಗಾವಣೆಗೊಂಡ ಶಿಕ್ಷಕರನ್ನು ಗೌರವದಿಂದ ಬೀಳ್ಕೊಟ್ಟಿದ್ದು, ಶಿಕ್ಷಕರಿಗೆ ಪುಷ್ಪವೃಷ್ಟಿಗೈದು ಸನ್ಮಾನಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸಿದ್ದಾರೆ.

ಬಾಗಲಕೋಟೆ, ಜನವರಿ 03: ಬಾಗಲಕೋಟೆ ಜಿಲ್ಲೆಯ ಬುದ್ನಿ ಪಿಎಂ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಅಚ್ಚುಮೆಚ್ಚಿನ ಶಿಕ್ಷಕರ ವರ್ಗಾವಣೆಯನ್ನು ಸಹಿಸಲಾಗದೆ ಶಾಲಾ ಮಕ್ಕಳು ಗೊಳೋ ಎಂದು ಕಣ್ಣೀರಿಟ್ಟಿದ್ದಾರೆ. ಶಿಕ್ಷಕರಾದ ವೆಂಕಟೇಶ್ ಪಾಟೀಲ್ ಹಾಗೂ ಬಿಜಿ ರಾಮನಗೌಡ ಪಾಟೀಲ್ ಅವರು ಬೇರೆಡೆಗೆ ವರ್ಗಾವಣೆಯಾಗಿದ್ದು, ಇದರ ಹಿನ್ನೆಲೆಯಲ್ಲಿ ಮಕ್ಕಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಆಳವಾದ ಬಾಂಧವ್ಯವನ್ನು ಇದು ಎತ್ತಿ ತೋರಿಸುತ್ತದೆ. ಮಕ್ಕಳಷ್ಟೇ ಅಲ್ಲದೆ, ಗ್ರಾಮಸ್ಥರು ಕೂಡ ವರ್ಗಾವಣೆಗೊಂಡ ಶಿಕ್ಷಕರನ್ನು ಗೌರವದಿಂದ ಬೀಳ್ಕೊಟ್ಟಿದ್ದು, ಶಿಕ್ಷಕರಿಗೆ ಪುಷ್ಪವೃಷ್ಟಿಗೈದು ಸನ್ಮಾನಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.