Monsoon Rain: ಮುಂಗಾರು ಮಳೆ ಅಬ್ಬರಕ್ಕೆ ಮುಳುಗಿದ ಬಾಗಮಂಡಲ

Edited By:

Updated on: Jul 06, 2023 | 2:30 PM

ರಾಜ್ಯದಲ್ಲಿ ಆಯ್ದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜಾಸ್ತಿಯಾಗಿದೆ. ಅದರಂತೆ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಭಾಗಮಂಡಲ ತ್ರಿವೇಣಿ ಸಂಗಮ‌ ಮುಳುಗಡೆಯಾಗಿದೆ.

ಕೊಡಗು: ರಾಜ್ಯದಲ್ಲಿ ಆಯ್ದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜಾಸ್ತಿಯಾಗಿದೆ. ಅದರಂತೆ ಕೊಡಗು(Kodagu) ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಭಾಗಮಂಡಲದಲ್ಲಿ ಕಾವೇರಿ ನದಿ ನೀರಿನ‌ಮಟ್ಟ ಏರಿಕೆಯಾಗಿದ್ದು, ಭಾಗಮಂಡಲ ತ್ರಿವೇಣಿ ಸಂಗಮ‌ ಮುಳುಗಡೆಯಾಗುವ ಸಾಧ್ಯತೆಯಿದೆ. ಮಡಿಕೇರಿ, ಭಾಗಮಂಡಲ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಸದ್ಯ ಸಂಚಾರಕ್ಕೆ ಸಾರ್ವಜನಿಕರು ಅಪೂರ್ಣ ಫ್ಲೈಓವರ್ ಬಳಸುತ್ತಿದ್ದು, ಭಾಗಮಂಡಲ-ವಿರಾಜಪೇಟೆ ರಸ್ತೆಯೂ ಜಲಾವೃತವಾಗುವ ಸಾಧ್ಯತೆ ಎದುರಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ