AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವದ ಹಂಗು ತೊರೆದು ಮಲಪ್ರಭಾ ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ

ಜೀವದ ಹಂಗು ತೊರೆದು ಮಲಪ್ರಭಾ ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ

ಸಹದೇವ್​ ಮಾನೆ
| Edited By: |

Updated on: Jul 23, 2026 | 1:34 PM

Share

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಬಳಿ, ಯುವಕ ಮಲ್ಲಿಕಾರ್ಜುನ ಗಾಣಿಗೇರ ಸಾಹಸ ಮೆರೆದಿದ್ದಾರೆ. ಮಲಪ್ರಭಾ ನದಿಯಲ್ಲಿ ನೀರು ಭಾರಿ ಪ್ರಮಾಣದಲ್ಲಿ ಹರಿಯುತ್ತಿದ್ದರೂ, ಆತ್ಮಹತ್ಯೆಗೆ ಯತ್ನಿಸಿ ಸೇತುವೆಯಿಂದ ಹಾರಿದ ಯುವತಿಯನ್ನು ಅವರು ತನ್ನ ಪ್ರಾಣದ ಹಂಗು ತೊರೆದು ರಕ್ಷಿಸಿದ್ದಾರೆ. ನೀರಿನ ಭೋರ್ಗರೆತ ಮತ್ತು ಪ್ರವಾಹದ ಸೆಳೆತದ ನಡುವೆಯೂ ಯುವತಿಯನ್ನು ಸುರಕ್ಷಿತವಾಗಿ ದಡಕ್ಕೆ ತಂದ ಈ ಕಾರ್ಯ ಶ್ಲಾಘನೀಯ.

ಬೈಲಹೊಂಗಲ, ಜು.23: ನದಿಯ ನೀರಿನ ಭಾರಿ ಸೆಳೆತದ ನಡುವೆಯೂ ಯುವಕನೊಬ್ಬ ತನ್ನ ಪ್ರಾಣದ ಹಂಗು ತೊರೆದು ಮಲಪ್ರಭಾ ನದಿಗೆ ಧುಮುಕಿ, ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಸಾಹಸಿಕವಾಗಿ ರಕ್ಷಿಸಿರುವ ಶ್ಲಾಘನೀಯ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಬಳಿ ನಡೆದಿದೆ. ನದಿಗೆ ಜಿಗಿದು ಯುವತಿಯ ಜೀವ ಉಳಿಸಿದ ಈ ಸಾಹಸಿ ಯುವಕನನ್ನು ಮಲ್ಲಿಕಾರ್ಜುನ ಗಾಣಿಗೇರ ಎಂದು ಗುರುತಿಸಲಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮನನೊಂದಿದ್ದ ಯುವತಿ, ಬೈಲಹೊಂಗಲ ತಾಲೂಕಿನ ನಯಾನಗರ ಸಮೀಪದ ಸೇತುವೆಯ ಮೇಲಿಂದ ಬರೋಬ್ಬರಿ 120 ಅಡಿ ಎತ್ತರದಿಂದ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ನದಿಯಲ್ಲಿ ಸದ್ಯ ನೀರು ಭಾರಿ ಪ್ರಮಾಣದಲ್ಲಿ ಹರಿಯುತ್ತಿದ್ದು, ನೀರಿನ ರಭಸಕ್ಕೆ ಯುವತಿ ಕೊಚ್ಚಿ ಹೋಗಿ ಮುಳುಗುತ್ತಿದ್ದಳು. ಈ ದೃಶ್ಯವನ್ನು ಕಂಡ ಸ್ಥಳೀಯ ಯುವಕ ಮಲ್ಲಿಕಾರ್ಜುನ ಗಾಣಿಗೇರ, ಒಂದು ಕ್ಷಣವೂ ಯೋಚಿಸದೆ ತಕ್ಷಣವೇ ನದಿಗೆ ಜಿಗಿದಿದ್ದಾರೆ. ಮುಳುಗುತ್ತಿದ್ದ ಯುವತಿಯನ್ನು ಸುರಕ್ಷಿತವಾಗಿ ದಡಕ್ಕೆ ತಂದು ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಮಯಪ್ರಜ್ಞೆ ಹಾಗೂ ಅಪಾರ ಧೈರ್ಯ ಪ್ರದರ್ಶಿಸಿ ಯುವತಿಯ ಜೀವ ಉಳಿಸಿದ ಮಲ್ಲಿಕಾರ್ಜುನ ಗಾಣಿಗೇರ ಅವರ ಕಾರ್ಯಕ್ಕೆ ಸ್ಥಳೀಯ ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More