Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರಧಾನಿ ಮೋದಿ ರೋಡ್ ಶೋನಲ್ಲಿ ಭಜರಂಗಿ ಅಲೆ; ವಿಡಿಯೋ ವೈರಲ್​

ಬೆಂಗಳೂರು: ಪ್ರಧಾನಿ ಮೋದಿ ರೋಡ್ ಶೋನಲ್ಲಿ ಭಜರಂಗಿ ಅಲೆ; ವಿಡಿಯೋ ವೈರಲ್​

ಕಿರಣ್ ಹನುಮಂತ್​ ಮಾದಾರ್
|

Updated on:May 06, 2023 | 12:35 PM

ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಾವು ಅಧಿಕಾರಕ್ಕೆ ಬಂದ ಮೇಲೆ ಬಜರಂಗದಳವನ್ನು ನಿಷೇಧಿಸುವಂತೆ ಪ್ರಸ್ತಾಪಿಸಿದ್ದು, ಕರ್ನಾಟಕದಲ್ಲಿ ವಿವಾದ ಭುಗಿಲೆದ್ದಿತ್ತು, ಇದೀಗ ಮೋದಿ ರೋಡ್​ ಶೋನಲ್ಲಿ ಭಜರಂಗಿ ವೇಷದ ಜೊತೆಗೆ ಹನುಮಾನ್​ ಮುಖವಾಡಗಳನ್ನ ಧರಿಸಿದ್ದಾರೆ.

ಬೆಂಗಳೂರು: ವಿಧಾನಸಭೆ ಚುನಾವಣಾ(Karnataka Assembly Election 2023) ಹಿನ್ನಲೆ ರಾಜ್ಯದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಇಂದು(ಮೇ.6) ನಗರದಲ್ಲಿ 26 ಕಿ.ಮೀ ಭರ್ಜರಿ ರೋಡ್‌ಶೋ ಮಾಡುತ್ತಿದ್ದಾರೆ. ಈ ವೇಳೆ ಮೋದಿ ರೋಡ್​ ಶೋನಲ್ಲಿ ಹನುಮಂತನ ಮುಖವಾಡಗಳನ್ನು ಧರಿಸಿದ ಹಲವಾರು ಜನರು ಭಾಗವಹಿಸಿದ್ದರು. ಹಿಂದುತ್ವ ಸಂಘಟನೆಯಾದ ಬಜರಂಗದಳವನ್ನು ನಿಷೇಧಿಸುವಂತೆ ಸೂಚಿಸಿದ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ವಿರೋಧಿಸಲು ಬಿಜೆಪಿ ಕಾರ್ಯಕರ್ತರು ಮತ್ತು ಪ್ರಧಾನಿ ಬೆಂಬಲಿಗರು ಭಗವಾನ್ ಹನುಮಂತನ ಮುಖವಾಡಗಳನ್ನು ಧರಿಸಿದ್ದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: May 06, 2023 12:25 PM