ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಹಬ್ಬ ಹತ್ತಿರ ಬರುತ್ತಿದ್ದಂತೆ ರಾಜ್ಯಾದ್ಯಂತ ಕುರಿ, ಮೇಕೆ ಹಾಗೂ ಕೋಳಿಗಳ ಖರೀದಿಗೆ ಭಾರಿ ಬೇಡಿಕೆ ವ್ಯಕ್ತವಾಗಿದೆ. ಅದರಲ್ಲೂ ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ಧ ಪೆರೆಸಂದ್ರ ಕುರಿ ಸಂತೆಯಲ್ಲಿ ವರ್ತಕರು ಕುರಿ, ಮೇಕೆ ಖರೀದಿಗೆ ಮುಗಿಬಿದ್ದಿದ್ದಾರೆ. ಈ ಸಂತೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ, ತಮಿಳುನಾಡು ಮತ್ತು ಕೇರಳದಿಂದಲೂ ವರ್ತಕರು ಆಗಮಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರ, ಮೇ 25: ಬಕ್ರೀದ್ ಹಬ್ಬ ಹತ್ತಿರ ಬರುತ್ತಿದ್ದಂತೆ ರಾಜ್ಯಾದ್ಯಂತ ಕುರಿ, ಮೇಕೆ ಹಾಗೂ ಕೋಳಿಗಳ ಖರೀದಿಗೆ ಭಾರಿ ಬೇಡಿಕೆ ವ್ಯಕ್ತವಾಗಿದೆ. ಅದರಲ್ಲೂ ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ಧ ಪೆರೆಸಂದ್ರ ಕುರಿ ಸಂತೆಯಲ್ಲಿ ವರ್ತಕರು ಕುರಿ, ಮೇಕೆ ಖರೀದಿಗೆ ಮುಗಿಬಿದ್ದಿದ್ದಾರೆ. ಈ ಸಂತೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ, ತಮಿಳುನಾಡು ಮತ್ತು ಕೇರಳದಿಂದಲೂ ವರ್ತಕರು ಆಗಮಿಸುತ್ತಿದ್ದಾರೆ.
ಮಾರಾಟಕ್ಕೆ ಸುಮಾರು 40 ಸಾವಿರಕ್ಕೂ ಹೆಚ್ಚು ಕುರಿಗಳು ಆಗಮಿಸಿದ್ದು, ಪ್ರಸ್ತುತ 25 ಸಾವಿರದಿಂದ 30 ಸಾವಿರಕ್ಕೂ ಹೆಚ್ಚು ಕುರಿಗಳು ಮಾರಾಟಕ್ಕೆ ಲಭ್ಯವಿವೆ. ಸಾವಿರಾರು ವ್ಯಾಪಾರಿಗಳು ತಮಗೆ ಇಷ್ಟವಾದ ಕುರಿ, ಮೇಕೆ, ಟಗರುಗಳನ್ನು ಹೆಚ್ಚಿನ ಬೆಲೆ ಕೊಟ್ಟು ಖರೀದಿಸುತ್ತಿದ್ದಾರೆ. ಪರಿಣಾಮವಾಗಿ, ಕುರಿ ಮಾಲೀಕರ ಮುಖದಲ್ಲಿ ಮಂದಹಾಸ ಮೂಡಿದೆ. ಒಂದು ಕುರಿಗೆ ಕನಿಷ್ಠ 3,000 ರೂಪಾಯಿಗಳಿಂದ ಆರಂಭವಾಗಿ, ಮೇಕೆಗಳಿಗೆ 10,000 ದಿಂದ 15,000 ರೂಪಾಯಿಗಳವರೆಗೂ ಬೆಲೆ ಇದೆ. ಒಟ್ಟಾರೆ, ಬಕ್ರೀದ್ ಹಬ್ಬದ ಪ್ರಯುಕ್ತ ಪೆರೆಸಂದ್ರ ಕುರಿ ಸಂತೆಯಲ್ಲಿ ವ್ಯಾಪಾರ-ವಹಿವಾಟು ಅತ್ಯಂತ ಬಿರುಸಿನಿಂದ ಸಾಗುತ್ತಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
