ಚೈತ್ರಾ ಹಳ್ಳಿಕೇರಿ ಹಣಕ್ಕಾಗಿ ಮೆಂಟಲಿ ಟಾರ್ಚರ್ ಮಾಡುತ್ತಿದ್ದಾರೆ; ಪತಿ ಬಾಲಾಜಿ ಪೋತರಾಜ್ ಆರೋಪ

ಚೈತ್ರಾ ಅವರ ಪತಿ ಬಾಲಾಜಿ ಪೋತರಾಜ್ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಚೈತ್ರಾ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ.

TV9kannada Web Team

| Edited By: Rajesh Duggumane

May 26, 2022 | 3:35 PM

ತಮಗೆ ಸೇರಿದ ಬ್ಯಾಂಕ್ ಖಾತೆಯನ್ನು ಕುಟುಂಬದವರೇ ದುರ್ಬಳಕೆ ಮಾಡಿದ್ದಾರೆ ಎಂದು ನಟಿ ಚೈತ್ರಾ ಹಳ್ಳಿಕೇರಿ (Chaitra Hallikeri) ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪತಿ ಮತ್ತು ಮಾವನ ವಿರುದ್ಧವೇ ಪೊಲೀಸರಿಗೆ ಅವರು ದೂರು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಸುದ್ದಿಗೋಷ್ಠಿ ನಡೆಸಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಈಗ ಚೈತ್ರಾ ಅವರ ಪತಿ ಬಾಲಾಜಿ ಪೋತರಾಜ್ ಅವರು (Balaji Potaraj) ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಚೈತ್ರಾ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ ಬಾಲಾಜಿ. ಅಷ್ಟೇ ಅಲ್ಲ, ಹಣಕ್ಕಾಗಿ ಚೈತ್ರಾ ಅವರೇ ಮಾಸಿಕವಾಗಿ ಟಾರ್ಚರ್ ನೀಡುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರು ಹೇಳಿದ್ದರಲ್ಲಿ ಯಾವುದು ಸತ್ಯ ಎನ್ನುವ ಪ್ರಶ್ನೆ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us on

Click on your DTH Provider to Add TV9 Kannada