AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಬೀಗ: ಸಿಲಿಂಡರ್ ಅವಘಡವೇ ಕಾರಣ, ಅಚ್ಚರಿಯ ಹೇಳಿಕೆ ನೀಡಿದ ಶಾಸಕ ಬಾಲಕೃಷ್ಣ

ಬಿಗ್ ಬಾಸ್ ಮನೆಗೆ ಬೀಗ: ಸಿಲಿಂಡರ್ ಅವಘಡವೇ ಕಾರಣ, ಅಚ್ಚರಿಯ ಹೇಳಿಕೆ ನೀಡಿದ ಶಾಸಕ ಬಾಲಕೃಷ್ಣ

ಅಕ್ಷಯ್​ ಪಲ್ಲಮಜಲು​​
|

Updated on: Oct 08, 2025 | 1:20 PM

Share

ಶಾಸಕ ಬಾಲಕೃಷ್ಣ ಅವರು ಬಿಗ್ ಬಾಸ್ ಮನೆಗೆ ಬೀಗ ಹಾಕಿರುವ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಪ್ರದೇಶದಲ್ಲಿ ಸಿಲಿಂಡರ್ ಅವಘಡ ಸಂಭವಿಸಿದೆ. ಆ ಕಾರಣದಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಸೂಕ್ತ ಅನುಮತಿಗಳೊಂದಿಗೆ ಕಾರ್ಯಕ್ರಮ ನಡೆಸಲು ಸಲಹೆ ನೀಡಿದ್ದಾರೆ. ಕಾರ್ಯಕ್ರಮವನ್ನು ಒಂದು ತಿಂಗಳು ಮುಂದೂಡಿದರೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು, ಅ.8: ಬೆಂಗಳೂರು ದಕ್ಷಿಣ ಜಿಲ್ಲಾಡಳಿತದಿಂದ ಬಿಗ್​​​ ಬಾಸ್​​​ (Bigg Boss Kannada) ಮನೆಗೆ ಬೀಗ ಬಿದ್ದಿದೆ. ಈ ಘಟನೆಗೆ ಸಂಬಂಧಿಸಿದಂತೆ ಶಾಸಕ ಬಾಲಕೃಷ್ಣ ಅವರು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಇತ್ತೀಚೆಗೆ ಜಾಲೀವುಡ್ ಸ್ಟುಡಿಯೋ ಬಳಿ ನಡೆದ ಸಿಲಿಂಡರ್ ಅವಘಡದ (Cylinder Accident) ಹಿನ್ನೆಲೆಯಲ್ಲಿ ಈ ಬೆಳವಣಿಗೆಗಳು ನಡೆದಿವೆ. ಸರಿಯಾದ ರೀತಿಯಲ್ಲಿ ಅಗತ್ಯವಿರುವ ಪ್ರಮಾಣಪತ್ರಗಳನ್ನು (NOC) ಪಡೆದು, ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ಕಾರ್ಯಕ್ರಮ ನಡೆಸಿದರೆ ಇಂತಹ ಅವಘಡಗಳು ಸಂಭವಿಸುವುದಿಲ್ಲ ಎಂದು ಹೇಳಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮವನ್ನು ಒಂದು ತಿಂಗಳ ಕಾಲ ಮುಂದೂಡಿದರೆ ಯಾವುದೇ ಪ್ರಾಣಹಾನಿಯಾಗುವುದಿಲ್ಲ. ಒಂದು ತಿಂಗಳ ನಂತರವೂ ಜನರು ಕಾರ್ಯಕ್ರಮವನ್ನು ನೋಡುತ್ತಾರೆ. ಜಾಲೀವುಡ್ ಮ್ಯಾನೇಜ್‌ಮೆಂಟ್‌ನ ಮುಖ್ಯ ಉದ್ದೇಶ ಬಿಗ್ ಬಾಸ್ ಕಾರ್ಯಕ್ರಮ ಸುಗಮವಾಗಿ ನಡೆಯುವುದು ಎಂದಿದ್ದಾರೆ. ಇದೇ ಭಾಗದಲ್ಲಿ ನಿರಂತರವಾಗಿ ಅವಘಡಗಳು ಸಂಭವಿಸುತ್ತಿರುವುದರಿಂದ ಹಾಗೂ ಇದೊಂದು ಕೈಗಾರಿಕಾ ಪ್ರದೇಶವಾಗಿರುವುದರಿಂದ, ಇಂತಹ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿಗಳು ತೀರ್ಮಾನಿಸಿದ್ದಾರೆ. ಜಿಲ್ಲಾಧಿಕಾರಿಗಳು 15 ದಿನಗಳ ಕಾಲಾವಕಾಶ ನೀಡಿದ್ದಾರೆ ಎಂಬ ಮಾಹಿತಿ ಬಂದಿದೆ. ಅದರ ಬಗ್ಗೆ ತಮಗೆ ಖಚಿತ ಮಾಹಿತಿ ಇಲ್ಲ. ಉಪಮುಖ್ಯಮಂತ್ರಿಗಳು ಸಹ 15 ದಿನಗಳ ಕಾಲಾವಕಾಶ ನೀಡುವಂತೆ ಕೋರಿದ್ದಾರೆ ಎಂದು ಬಾಲಕೃಷ್ಣ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ