ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಮಂಡ್ಯ ಜಿಲ್ಲಾಡಳಿತ: ಕಾರಣ ಇಲ್ಲಿದೆ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಕಳೆದ ಎರಡು ತಿಂಗಳಲ್ಲಿ ನಾಲ್ಕು ಮತ್ತು ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಈ ನಿರ್ಬಂಧ ಹೇರಲಾಗಿದೆ. ಮುಂದಿನ ಆದೇಶದವರೆಗೆ ಈ ಪ್ರದೇಶಗಳಿಗೆ ಪ್ರವೇಶವಿರುವುದಿಲ್ಲ.
ಮಂಡ್ಯ, ಏಪ್ರಿಲ್ 19: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಪ್ರದೇಶಗಳು ಮೃತ್ಯುಕೂಪವಾಗಿ ಮಾರ್ಪಟ್ಟಿದ್ದು, ನೀರಿನಲ್ಲಿ ಈಜಾಡಲು ಹೋಗಿ ಹಲವರು ಜೀವ ಕಳೆದುಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದಾರೆ. ಕಳೆದ ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಜನರು ಇಲ್ಲಿ ಜೀವ ಕಳೆದುಕೊಂಡಿದ್ದಾರೆ. ಈಗ ಬೇಸಿಗೆ ರಜೆ ಇರುವ ಕಾರಣ ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುವ ಹಿನ್ನೆಲೆ, ಮುಂಜಾಗೃತಾ ಕ್ರಮವಾಗಿ ಮಂಡ್ಯ ಜಿಲ್ಲಾಡಳಿತವು ಮುಂದಿನ ಆದೇಶದವರೆಗೆ ಬಲಮುರಿ ಮತ್ತು ಎಡಮುರಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ, ಯಾರೂ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ

