ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಮಂಡ್ಯ ಜಿಲ್ಲಾಡಳಿತ: ಕಾರಣ ಇಲ್ಲಿದೆ

Edited By:

Updated on: Apr 19, 2026 | 8:59 AM

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಕಳೆದ ಎರಡು ತಿಂಗಳಲ್ಲಿ ನಾಲ್ಕು ಮತ್ತು ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಈ ನಿರ್ಬಂಧ ಹೇರಲಾಗಿದೆ. ಮುಂದಿನ ಆದೇಶದವರೆಗೆ ಈ ಪ್ರದೇಶಗಳಿಗೆ ಪ್ರವೇಶವಿರುವುದಿಲ್ಲ.

ಮಂಡ್ಯ, ಏಪ್ರಿಲ್​​ 19: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಪ್ರದೇಶಗಳು ಮೃತ್ಯುಕೂಪವಾಗಿ ಮಾರ್ಪಟ್ಟಿದ್ದು, ನೀರಿನಲ್ಲಿ ಈಜಾಡಲು ಹೋಗಿ ಹಲವರು ಜೀವ ಕಳೆದುಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದಾರೆ. ಕಳೆದ ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಜನರು ಇಲ್ಲಿ ಜೀವ ಕಳೆದುಕೊಂಡಿದ್ದಾರೆ. ಈಗ ಬೇಸಿಗೆ ರಜೆ ಇರುವ ಕಾರಣ ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುವ ಹಿನ್ನೆಲೆ, ಮುಂಜಾಗೃತಾ ಕ್ರಮವಾಗಿ ಮಂಡ್ಯ ಜಿಲ್ಲಾಡಳಿತವು ಮುಂದಿನ ಆದೇಶದವರೆಗೆ ಬಲಮುರಿ ಮತ್ತು ಎಡಮುರಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ, ಯಾರೂ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More