‘ಬಲರಾಮನ ದಿನಗಳು ನನ್ನ ಜೀವನದ ಅತಿ ದೊಡ್ಡ ಸಿನಿಮಾ’: ವಿನೋದ್ ಪ್ರಭಾಕರ್

Updated on: Jun 09, 2026 | 10:37 PM

ನಟ ವಿನೋದ್ ಪ್ರಭಾಕರ್ ಅವರು ‘ಬಲರಾಮನ ದಿನಗಳು’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾ ಅವರ ವೃತ್ತಿಜೀವನದ ಅತಿ ದೊಡ್ಡ ಪ್ರಾಜೆಕ್ಟ್. ಆ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೆ.ಎಂ. ಚೈತನ್ಯ ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ.

ನಟ ವಿನೋದ್ ಪ್ರಭಾಕರ್ ಅವರು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾ ಅವರ ವೃತ್ತಿಜೀವನದ ಅತಿ ದೊಡ್ಡ ಪ್ರಾಜೆಕ್ಟ್. ಆ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೆ.ಎಂ. ಚೈತನ್ಯ ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ. ‘ನನ್ನ ಸಿನಿಮಾಗಳ ಗ್ರಾಫ್ ನೋಡಿದರೆ ಮಾದೇವ ಚಿತ್ರದ ಬಳಿಕ ತುಂಬ ಬದಲಾವಣೆ ಆಗಿದೆ. ನನ್ನ ವೃತ್ತಿಜೀವನದಲ್ಲಿ ಇದು ದೊಡ್ಡ ಸಿನಿಮಾ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಪ್ರಚಾರಕ್ಕಾಗಿ ನಾವು ಸಾಕಷ್ಟು ಪ್ಲ್ಯಾನ್ ಮಾಡಿಕೊಂಡಿದ್ದೇವೆ. ನಿರ್ದೇಶಕರ ಜೊತೆ ಪ್ರಚಾರ ಮಾಡುತ್ತಿದ್ದೇನೆ. ಅವರ ಜ್ಞಾನ ತುಂಬ ದೊಡ್ಡದು. ಅವರ ಜೊತೆ ಕೆಲಸ ಮಾಡಿದ್ದಕ್ಕೆ ನನಗೆ ಬಹಳ ಹೆಮ್ಮೆ ಇದೆ. ಈ ಸಿನಿಮಾದ ನಂತರವೂ ಅವರ ಜೊತೆ ಕೆಲಸ ಮಾಡಲು ನಾನು ಸಿದ್ಧವಾಗಿರುತ್ತೇನೆ’ ಎಂದು ವಿನೋದ್ ಪ್ರಭಾಕರ್ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More