ಅಭಿಮಾನಿಗಳಿಂದ ಪುನೀತ್ ಫೋಟೋ ಕೇಳಿ ಪಡೆದ ಬಾಲಯ್ಯ

Updated on: Nov 22, 2025 | 11:27 AM

ಬಾಲಯ್ಯ ನಟನೆಯ ‘ಅಖಂಡ 2’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಚಿಕ್ಕಬ್ಳಾಪುರದಲ್ಲಿ ಈ ಕಾರ್ಯಕ್ರಮ ನಡೆದಿದೆ. ಬಾಲಯ್ಯ ಅವರಿಗೆ ಪುನೀತ್ ಫೋಟೋ ಗಿಫ್ಟ್ ಆಗಿ ಸಿಕ್ಕಿದೆ. ಇದನ್ನು ಅವರು ಖುಷಿಯಿಂದ ಸ್ವೀಕರಿಸಿದ್ದಾರೆ.  ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ಪುನೀತ್ ರಾಜ್​ಕುಮಾರ್ ಇಲ್ಲ ಎಂಬ ನೋವು ಅಭಿಮಾನಿಗಳನ್ನು ಈಗಲೂ ಕಾಡುತ್ತಿದೆ. ಯಾವುದೇ ಸಭೆ ಸಮಾರಂಭ ಇದ್ದರೂ ಪುನೀತ್ ಅವರನ್ನು ನೆನಪಿಸಿಕೊಳ್ಳಲಾಗುತ್ತದೆ. ‘ಅಖಂಡ 2’ ಚಿತ್ರದ ಟ್ರೇಲರ್ ಲಾಂಚ್ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ. ಈ ವೇಳೆ ಅಪ್ಪು ಅಭಿಮಾನಿಗಳು ಪುನೀತ್ ಫೋಟೋ ಪ್ರೇಮ್​ನ ಎತ್ತಿ ಹಿಡಿದಿದ್ದಾರೆ. ಬಾಲಯ್ಯ ಅವರು ಅವರಿಂದ ಫೋಟೋನ ಕೇಳಿ ಪಡೆದುಕೊಂಡಿದ್ದಾರೆ. ಅಪ್ಪು ಫೋಟೋ ಜೊತೆ ಪೋಸ್ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More