ಬ್ಯಾನರ್ ಗಲಾಟೆ ವೇಳೆ ಫೈರಿಂಗ್: ಸ್ಫೋಟಕ ಸಾಕ್ಷಿಕೊಟ್ಟ ಮಾಜಿ ಸಚಿವ ಶ್ರೀರಾಮುಲು
ಬಳ್ಳಾರಿಯಲ್ಲಿ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಹಿಂಸಾಚಾರ ಮತ್ತು ಗುಂಡಿನ ದಾಳಿ ಘಟನೆ ಕುರಿತು ಮಾಜಿ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ. ವಿರೋಧಿಗಳ ಗೂಂಡಾಗಿರಿಗೆ ನಾವು ಭಯಪಡುವುದಿಲ್ಲ ಎಂದ ಅವರು, ಹೈಕೋರ್ಟ್ ಸಿಟ್ಟಿಂಗ್ ನ್ಯಾಯಾಧೀಶರಿಂದ ಅಥವಾ ಸಿಬಿಐನಿಂದ ಪ್ರಕರಣದ ತನಿಖೆಗೆ ಆಗ್ರಹಿಸಿದ್ದಾರೆ.
ಬಳ್ಳಾರಿ, ಜನವರಿ 02: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಘರ್ಷಣೆ ಸಂಬಂಧ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಗೂಂಡಾಗಿರಿಯ ಆರೋಪಗಳನ್ನು ತಳ್ಳಿಹಾಕಿದ ಶ್ರೀರಾಮುಲು, ವಿರೋಧಿಗಳೇ ಪೂರ್ವನಿಯೋಜಿತವಾಗಿ ಪೆಟ್ರೋಲ್ ಬಾಂಬ್‌ಗಳನ್ನು ತಂದು, ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಗುಂಡಿನ ದಾಳಿಯೂ ಅವರ ಕಡೆಯಿಂದಲೇ ನಡೆದಿದೆ. ಸತೀಶ್ ರೆಡ್ಡಿ ಅವರ ಬೆಂಬಲಿಗರು ಮತ್ತು ಅಂಗರಕ್ಷಕರು ಗುಂಡು ಹಾರಿಸಿದ್ದಾರೆ. ಹೀಗಾಗಿ ಸಿಟ್ಟಿಂಗ್ ಹೈಕೋರ್ಟ್ ನ್ಯಾಯಾಧೀಶರಿಂದ ಅಥವಾ ಸಿಬಿಐನಿಂದ ತನಿಖೆ ನಡೆಸಬೇಕು ಎಂದು ಶ್ರೀರಾಮುಲು ಒತ್ತಾಯಿಸಿದ್ದಾರೆ. ಜೊತೆಗೆ ಘಟನೆಗೆ ಸಂಬಂಧಿಸಿ ಸ್ಪೋಟಕ ವಿಡಿಯೋ ಸಾಕ್ಷಿಯನ್ನು ಬಹಿರಂಗೊಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
