ಬಳ್ಳಾರಿಯಲ್ಲಿ ಬ್ಯಾನರ್​ ಗಲಾಟೆ: ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು

Edited By:

Updated on: Jan 01, 2026 | 11:06 PM

ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ವಿಚಾರಕ್ಕೆ ಆರಂಭವಾದ ಗಲಾಟೆ ಹಿಂಸಾಚಾರಕ್ಕೆ ತಿರುಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್ ಕಟ್ಟಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಕಲ್ಲು ತೂರಾಟ, ಲಾಠಿ ಚಾರ್ಜ್ ನಡುವೆ ಗುಂಡೇಟಿನಿಂದ ಓರ್ವ ಕಾಂಗ್ರೆಸ್ ಕಾರ್ಯಕರ್ತ ಬಲಿ ಆಗಿದ್ದಾರೆ.

ಬಳ್ಳಾರಿ, ಜನವರಿ 01: ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್ ನಡೆದಿದೆ. ಈ ವೇಳೆ ಕಾಂಗ್ರೆಸ್​ ಕಾರ್ಯಕರ್ತ ಬಲಿ ಆಗಿದ್ದಾರೆ. ಫೈರಿಂಗ್​​ನಲ್ಲಿ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ.​​ ಸದ್ಯ  ರಾಜಶೇಖರ್ ಮೃತದೇಹವನ್ನು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತು ಗೃಹಸಚಿವ ಪರಮೇಶ್ವರ್​​​ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಪೊಲೀಸ್​ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jan 01, 2026 11:05 PM