ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ಗೆ ಏರಿ, ಜನರನ್ನು ಹೈರಾಣಾಗಿಸಿದೆ. ಹೆಚ್ಚಿದ ಬಿಸಿಲನ್ನು ಎದುರಿಸಲು, ಜನರು ಎಸಿ ಮತ್ತು ಕೂಲರ್‌ಗಳ ಜೊತೆಗೆ ಸಾಂಪ್ರದಾಯಿಕ ಮಣ್ಣಿನ ಮಡಿಕೆಗಳನ್ನು ಹೆಚ್ಚಾಗಿ ಖರೀದಿಸುತ್ತಿದ್ದಾರೆ. ಮಡಿಕೆಗಳಲ್ಲಿನ ನೀರು ನೈಸರ್ಗಿಕವಾಗಿ ತಂಪಾಗಿ ಮತ್ತು ಆರೋಗ್ಯಕರವಾಗಿರುತ್ತದೆ, ಇದು ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬೇಸಿಗೆಯಲ್ಲಿ ಜನಪ್ರಿಯ ಆಯ್ಕೆಯಾಗಿದೆ.
ಬಳ್ಳಾರಿ, ಏಪ್ರಿಲ್ 20: ಬಳ್ಳಾರಿಯಲ್ಲಿ ಬಿಸಿಲಿನ ತಾಪ ದಿನೇ ದಿನೇ ಏರುತ್ತಿದ್ದು, 39 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದರಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಹೆಚ್ಚುತ್ತಿರುವ ತಾಪಮಾನದಿಂದ ರಕ್ಷಿಸಿಕೊಳ್ಳಲು, ಜನರು ತಂಪಾದ ನೀರು ಕುಡಿಯುವುದಕ್ಕಾಗಿ ಮಣ್ಣಿನ ಮಡಿಕೆಗಳ ಮೊರೆ ಹೋಗುತ್ತಿದ್ದಾರೆ. ನಗರದ ಸಂಗಂ ಸರ್ಕಲ್ ಬಳಿ ಮಣ್ಣಿನ ಮಡಿಕೆಗಳ ಮಾರಾಟ ಜೋರಾಗಿದ್ದು, ಜನರು ಇವುಗಳನ್ನು ಖರೀದಿಸಲು ಮುಗಿಬಿದ್ದಿದ್ದಾರೆ. ಮಣ್ಣಿನ ಮಡಿಕೆಯಲ್ಲಿನ ನೀರು ನೈಸರ್ಗಿಕವಾಗಿ ತಂಪಾಗಿರುತ್ತದೆ ಮತ್ತು ಆರೋಗ್ಯಕ್ಕೂ ಒಳ್ಳೆಯದು ಎಂಬ ನಂಬಿಕೆ ಜನರಲ್ಲಿದೆ. ಪ್ರತಿ ಮಡಿಕೆಯ ಬೆಲೆ 350 ರೂಪಾಯಿಗಳಿಂದ 600 ರೂಪಾಯಿಗಳ ವರೆಗೆ ಇದೆ. ಮಣ್ಣಿನ ಮಡಿಕೆಗಳ ಜೊತೆಗೆ, ಎಲೆಕ್ಟ್ರಾನಿಕ್ ಕೂಲಿಂಗ್ ಸಾಧನಗಳಾದ ಎಸಿ ಮತ್ತು ಕೂಲರ್‌ಗಳು, ತಂಪು ಪಾನೀಯಗಳ ಮಾರಾಟವೂ ಹೆಚ್ಚಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
