Ballari | ಸಿದ್ದರಾಮಯ್ಯನವರನ್ನು ಮುಗಿಸಬೇಕೆಂದು ಹೇಳುವ ಅಶ್ವಥ್ ನಾರಾಯಣ ಒಬ್ಬ ಅವಿವೇಕಿ: ಬಿ ನಾಗೇಂದ್ರ, ಬಳ್ಳಾರಿ ಶಾಸಕ
ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರು ಹಿಂಸೆಗೆ ಪ್ರಚೋದನೆ ನೀಡುವ ಮಾತುಗಳನ್ನು ಆಡುತ್ತಿದ್ದಾರೆ. ಅವರ ಧೋರಣೆ ಬಿಜೆಪಿಯ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ನಾಗೇಂದ್ರ ಹೇಳಿದರು.
ಬಳ್ಳಾರಿ: ಬಳ್ಳಾರಿ ಶಾಸಕ ಬಿ ನಾಗೇಂದ್ರ (B Nagendra) ಬಿಜೆಪಿ ನಾಯಕರ ವಿರುದ್ಧ ಇಂದು ವಾಗ್ದಾಳಿ ನಡೆಸಿದರು. ಬಳ್ಳಾರಿಯಲ್ಲಿ ಆಯೋಜಿಸಲಾಗಿದ್ದ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ನಾಗೇಂದ್ರ, ಟಿಪ್ಪು ಸುಲ್ತಾನ್ ನಂತೆ ಸಿದ್ದರಾಮಯ್ಯನವರನ್ನು (Siddaramaiah) ಮುಗಿಸಿಬಿಡಬೇಕೆಂದದು ಹೇಳಿಕೆ ನೀಡಿದ ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಅವರನ್ನು ಅವಿವೇಕಿ ಎಂದು ಜರಿದರು. ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರು ಹಿಂಸೆಗೆ ಪ್ರಚೋದನೆ ನೀಡುವ ಮಾತುಗಳನ್ನು ಆಡುತ್ತಿದ್ದಾರೆ. ಅವರ ಧೋರಣೆ ಬಿಜೆಪಿಯ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ನಾಗೇಂದ್ರ ಹೇಳಿದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 18, 2023 01:55 PM