ಬಳ್ಳಾರಿಯಲ್ಲಿ ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ

Edited By:

Updated on: May 21, 2026 | 10:42 PM

ಬಳ್ಳಾರಿಯ ಗಾಂಧಿನಗರ, ಎಪಿಎಂಸಿ ಮತ್ತು ಬ್ರೂಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ಜೋರಾಗಿದೆ. ವೇಶ್ಯಾವಾಟಿಕೆಗೆ ಕಡಿವಾಣ ಹಾಕಲು ಪೊಲೀಸರು ಸತತ ಪ್ರಯತ್ನ ನಡೆಸಿದ್ದು, ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. 6 ಆರೋಪಿಗಳನ್ನು ಬಂಧಿಸಿದ್ದು, 8 ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ.

ಬಳ್ಳಾರಿ, ಮೇ 21: ವಿವಿಧ ಏರಿಯಾಗಳಲ್ಲಿ ನಡೆದಿದ್ದ ವೇಶ್ಯಾವಾಟಿಕೆ ದಂಧೆಗೆ ಕಡಿವಾಣ ಹಾಕಲು ಪೊಲೀಸರು ಸತ ಕಾರ್ಯಾಚರಣೆ ನಡೆಸಿದ್ದಾರೆ. ಗಾಂಧಿನಗರ, ಎಪಿಎಂಸಿ ಮತ್ತು ಬ್ರೂಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕು ಮನೆಗಳಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಮೂರು ಠಾಣೆಗಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಏಕಕಾಲದಲ್ಲಿ ದಿಢೀರ್ ದಾಳಿ ಮಾಡಿದ್ದಾರೆ. ಈ ವೇಳೆ ದಂಧೆಯಲ್ಲಿ ತೊಡಗಿದ್ದ 6 ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ 8 ಮಹಿಳಾ ಸಂತ್ರಸ್ತೆಯರನ್ನು ರಕ್ಷಣೆ ಮಾಡಲಾಗಿದೆ. ಗಾಂಜಾ, ಇಸ್ಪೀಟ್ ದಂಧೆಯಂತೆ ವೇಶ್ಯಾವಾಟಿಕೆಯೂ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಮುಂದಿನ ದಿನಗಳಲ್ಲೂ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ವಿನಾಯಕ ಬಡಿಗೇರ್​