ಬಳ್ಳಾರಿ ಗಲಭೆ: 30 ಕಾಂಗ್ರೆಸ್ ಕಾರ್ಯಕರ್ತರಿಗೆ ಶಾಕ್ ಕೊಟ್ಟ ಪೊಲೀಸರು
ಬಳ್ಳಾರಿ ಗಲಭೆ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, 107 ಜನರಿಗೆ ನೋಟಿಸ್ ನೀಡಿದ್ದಾರೆ. ಇದರಲ್ಲಿ 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಹಾಗೂ 33 ಬಿಜೆಪಿ ನಾಯಕರು (ರೆಡ್ಡಿ ಸಹೋದರರು ಸೇರಿ) ಇದ್ದಾರೆ. ಗಲಭೆ ವಿಡಿಯೋ ಆಧರಿಸಿ ಪೊಲೀಸರು ಬಂಧನ ಪ್ರಕ್ರಿಯೆ ನಡೆಸುತ್ತಿದ್ದು, ಈಗಾಗಲೇ 26 ಮಂದಿಯನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ತಮ್ಮದೇ ಕಾರ್ಯಕರ್ತರಿಗೆ ನೋಟಿಸ್ ನೀಡಿರುವುದು ಆಶ್ಚರ್ಯ ಮೂಡಿಸಿದ್ದು, ಸಚಿವ ಸಂಪುಟ ಸಭೆಯಲ್ಲೂ ಈ ಕುರಿತು ಚರ್ಚೆಯಾಗಲಿದೆ.
ಬಳ್ಳಾರಿ, ಜ.8: ಬಳ್ಳಾರಿ ಗಲಭೆಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಗೂ ನೊಟೀಸ್ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 107 ಜನರಿಗೆ ನೊಟೀಸ್ ಕೊಟ್ಟಿದ್ದರು. ಅದರಲ್ಲಿ 30 ಕಾಂಗ್ರೆಸ್ ಕಾರ್ಯಕರ್ತರು ಎಂದು ಹೇಳಲಾಗಿದೆ. ಇದೀಗ ಈ 107 ಮಂದಿಯಲ್ಲಿ ಬಹುತೇಕರು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಗಲಭೆ ಸಂದರ್ಭದಲ್ಲಿ ಸೆರೆಯಾದ ವಿಡಿಯೋ ಆಧಾರಿಸಿ ಪೊಲೀಸರು ಇವರ ಬಂಧನಕ್ಕೆ ಬಲೆ ಬಿಸಿದ್ದಾರೆ. ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದರು ತಮ್ಮದೇ ಕಾರ್ಯಕರ್ತರಿಗೆ ನೋಟಿಸ್ ನೀಡಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಮಾತ್ರ ಈ ಪ್ರಕರಣದಲ್ಲಿ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪಗಳು ಬಂದಿತ್ತು. ಆದರೆ ಇದೀಗ ಪೊಲೀಸರು 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಗೂ ನೊಟೀಸ್ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೂ ಕೂಡ ನೋಟಿಸ್ ನೀಡಲಾಗಿತ್ತು. ಇದೀಗ ಈ ಗಲಾಟೆಗೆ ಬಿಜೆಪಿ ನಾಯಕರಿಗೂ ನೋಟಸ್ ನೀಡಲು ಮುಂದಾಗಿದೆ. ಮತ್ತೆ ಬಿಜೆಪಿಯ 33 ಜನರಿಗೆ ನೋಟಿಸ್ ನೀಡಲಾಗಿದೆ. ಶಾಸಕ ಜರ್ನಾದನ ರೆಡ್ಡಿ, ಸೋಮಶೇಖರ್ ರೆಡ್ಡಿ, ರಾಮುಲು ಸೇರಿದಂತೆ ಒಟ್ಟು 33 ಜನರಿಗೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲೂ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನಷ್ಟು ತನಿಖೆಯನ್ನು ನಡೆಸಿದ್ದಾರೆ. ಈಗಾಗಲೇ 26 ಜನರನ್ನು ಪೊಲೀಸ್ ಬಂಧಿಸಿದ್ದಾರೆ. ಇದರ ಜತೆಗೆ ರೆಡ್ಡಿ ಆಪ್ತರಾಗಿರುವ ಸುರೇಶ್ ಬಾಬು ಕೂಡ ಪೊಲೀಸರು ಠಾಣೆಗೆ ಬರುವಂತೆ ಸೂಚಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ