ಬಳ್ಳಾರಿ: ಸಿರುಗುಪ್ಪ ಹಾಸ್ಟೆಲ್ ಅಡುಗೆ ಸರಿಯಿಲ್ಲ ಎಂದು ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ವಾರ್ಡನ್ ಹಲ್ಲೆ
ಅಡುಗೆ ಸರಿಯಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಾಸ್ಟೆಲ್ ವಾರ್ಡರ್ ರೌಡಿಗಳಂತೆ ಹಲ್ಲೆ ನಡೆಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ನಂ.2 ಎಸ್ಸಿ ಹಾಸ್ಟೆಲ್‌ನಲ್ಲಿ ನಡೆದಿದೆ. ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದ್ದು, ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿದ ವಾರ್ಡನ್ ದಾವೂದ್ನನ್ನು ವಜಾಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ.
ಬಳ್ಳಾರಿ, ಫೆ.16: ಅಡುಗೆ ಸರಿಯಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಾಸ್ಟೆಲ್ ವಾರ್ಡರ್ ರೌಡಿಗಳಂತೆ ಹಲ್ಲೆ ನಡೆಸಿದ ಘಟನೆ ಬಳ್ಳಾರಿ (Ballari) ಜಿಲ್ಲೆಯ ಸಿರುಗುಪ್ಪದ ನಂ.2 ಎಸ್ಸಿ ಹಾಸ್ಟೆಲ್‌ನಲ್ಲಿ ನಡೆದಿದೆ. ಬಿಎ ವಿದ್ಯಾರ್ಥಿ ರವಿ ಮೇಲೆ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದ್ದು, ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿದ ವಾರ್ಡನ್ ದಾವೂದ್ನನ್ನು ವಜಾಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ. ಹಾಸ್ಟೆಲ್ ಮ್ಯಾನೇಜ್ಮೆಂಟ್ ಸಿಬ್ಬಂದಿ ಬಾಲರಾಮ್ ಮತ್ತು ವಾರ್ಡನ್ ದಾವೂದ್ ಎಂಬವರು ವಿದ್ಯಾರ್ಥಿ ರವಿಯನ್ನು ಎಳೆದಾಡಿ ಶರ್ಟ್ ಹರಿದುಹಾಕಿ ಹಲ್ಲೆ ಮಾಡಿ ರೌಡಿಗಳಂತೆ ವರ್ತಿಸಿದ್ದಾರೆ. ಹಲ್ಲೆ ಮಾಡಿದ್ದ ಬಗ್ಗೆ ಮಾಹಿತಿ ನೀಡಿದಕ್ಕೆ ವಿದ್ಯಾರ್ಥಿ ಮೇಲೆ ಮತ್ತೆ ದೌರ್ಜನ್ಯ ಎಸಗಿರುವ ಆರೋಪವೂ ಕೇಳಿಬಂದಿದೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
