ಬಳ್ಳಾರಿ ಗಲಭೆ: ನಾಳೆ ನಡೆಯಲಿರುವ ಬಿಜೆಪಿ ಬೃಹತ್ ಪ್ರತಿಭಟನೆ ರ‍್ಯಾಲಿ ಬಗ್ಗೆ ಎಸ್ಪಿ ಹೇಳಿದ್ದಿಷ್ಟು
ಬಳ್ಳಾರಿಯಲ್ಲಿ ಬ್ಯಾನರ್ ಗಲಭೆ ಮತ್ತು ಫೈರಿಂಗ್ ಘಟನೆ ಹಿನ್ನೆಲೆಯಲ್ಲಿ, ಬಿಜೆಪಿ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ, ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಭಾರಿ ಬಿಗಿ ಭದ್ರತೆ ಕೈಗೊಂಡಿದೆ. ವಿಡಿಯೋ ನೋಡಿ.
ಬಳ್ಳಾರಿ, ಜನವರಿ 16: ಬ್ಯಾನರ್ ವಿಚಾರಕ್ಕೆ ಗಲಭೆ ಮತ್ತು ಫೈರಿಂಗ್ ಪ್ರಕರಣ ಘಟನೆ ಖಂಡಿಸಿ ಜ 17ರಂದು ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ಎಸ್ಪಿ ಸುಮನ್ ಡಿ.ಪನ್ನೇಕರ್ ಪ್ರತಿಕ್ರಿಯಿಸಿದ್ದು, ಸಮಾವೇಶದಲ್ಲಿ 15-20 ಸಾವಿರ ಜನ ಭಾಗಿಯಾಗುವ ಸಾಧ್ಯತೆ ಇದೆ. ಭದ್ರತೆಗಾಗಿ ಬೇರೆ ಜಿಲ್ಲೆಗಳಿಂದ ಅಧಿಕಾರಿಗಳು, ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇಬ್ಬರು ಎಸ್ಪಿ, 7 ಹೆಚ್ಚವರಿ ಎಸ್ಪಿ, 15 ಡಿವೈಎಸ್ಪಿ, 55 ಸಿಪಿಐ, 122 ಪಿಎಸ್ಐ, 81 ಎಎಸ್ಐ, 1233 ಪೊಲೀಸ್ ಕಾನ್ಸ್ಟೇಬಲ್, 171 ಮಹಿಳಾ ಪೊಲೀಸ್ ಸಿಬ್ಬಂದಿ, 500 ಹೋಮ್ಗಾರ್ಡ್ ಸಿಬ್ಬಂದಿ, 12 ಡಿಎಆರ್ ತುಕಡಿ, 17 ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಈಗಾಗಲೇ ಸಮಾವೇಶದ ಆಯೋಜಕರಿಂದ ಮಾಹಿತಿ ಪಡೆದಿದ್ದೇವೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.